ಈಗಿನ ಸುದ್ದಿ

1984ರ ಸಿಖ್ ದಂಗೆ: ಸಜ್ಜನ್ ಅರ್ಜಿ ವಜಾ

Published On :

ನವದೆಹಲಿ: 1984ರ ಸಿಖ್ ದಂಗೆ ಪ್ರಕರಣದ ಪ್ರಮುಖ ಆರೋಪಿ ಕಾಂಗ್ರೆಸ್ ಹಿರಿಯ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ.

ಸಿಖ್ರ ಹತ್ಯೆ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಒಳಸಂಚು ನಡೆಸಿಲ್ಲ. ಹೀಗಾಗಿ ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿ ಸಜ್ಜನ್ ಕುಮಾರ್ ಸೇರಿದಂತೆ ಪ್ರಕರಣದ ಸಹ ಆರೋಪಿಗಳಾದ ವೇದ ಪ್ರಕಾಶ್ ಪಿಳೈ ಅಲಿಯಾಸ್ ವೇದು ಪ್ರಧಾನ್ ಮತ್ತು ಬ್ರಹ್ಮನಂದ ಗುಪ್ತ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಸುರೇಶ್ ಕೈಟ್ ಅವರು, ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಅರ್ಜಿಯನ್ನು ವಜಾಗೊಳಿಸಿದ್ದಾರೆ.

1984ರಲ್ಲಿ ನಡೆದ ಸಿಖ್ ದಂಗೆಯಲ್ಲಿ ದೆಹಲಿಯ ಸುಲ್ತಾನ್ಪುರಿಯಲ್ಲಿ 6 ಸಿಖ್ರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಪ್ರತ್ಯಕ್ಷದರ್ಶಿಯಾಗಿದ್ದ ಸುಶೀಲಾ ಕೌರ್, ಸಜ್ಜನ್ ಅವರ ವಿರುದ್ಧ ಸಿಖ್ ನರಮೇಧಕ್ಕೆ ಒಳಸಂಚು ನಡೆಸಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.