ಈಗಿನ ಸುದ್ದಿ

ಆಸಿಡ್‌ ಅನ್ನು ವಿಷವೆಂದು ಪರಿಗಣಿಸಿ; ಕೇಂದ್ರ

ಆಸಿಡ್‌ ಅನ್ನು ವಿಷವೆಂದು ಪರಿಗಣಿಸಿ; ಕೇಂದ್ರ
Published On :

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಆಸಿಡ್ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ತಾನು ತೆಗೆದುಕೊಂಡ ಕ್ರಮಗಳ ಬಗ್ಗೆ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದ್ದು, ವರದಿಯಲ್ಲಿ ಆಸಿಡ್ ಅನ್ನು ವಿಷವೆಂದು ಪರಿಗಣಿಸಿ, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರದಂತೆ ನಿಷೇಧ ಹೇರಲು ನಿರ್ಧರಿಸಿರುವುದಾಗಿ ತಿಳಿಸಿದೆ.

ಆಸಿಡ್ ದಾಳಿಗೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೆಲವೊಂದು ಕ್ರಮಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ, ಆ ಕುರಿತು ವರದಿ ಸಿದ್ಧಪಡಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ. ಆದರೆ ವರದಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಎರಡು ದಿನಗಳ ಕಾಲ ಮುಂದೂಡಿದೆ.

ಕೇಂದ್ರ ಸರ್ಕಾರ ಸಲ್ಲಿಸಿರುವ ವರದಿಯಲ್ಲಿ, ಆಸಿಡ್ ಅನ್ನು ವಿಷವೆಂದು ಪರಿಗಣಿಸಿ, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡದಂತೆ ನಿಷೇಧ ಹೇರುವುದು ಸೇರಿದಂತೆ ಕೆಲವೊಂದು ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ.

ಆಸಿಡ್ ಮಾರಾಟ ಮಾಡಲು ಲೈಸೆನ್ಸ್ ಪಡೆದುಕೊಳ್ಳಬೇಕು. ಅಲ್ಲದೆ ಆಸಿಡ್ ಖರೀದಿಸುವವರು ಸಹ ತಮ್ಮ ಗುರುತಿನ ಚೀಟಿ ಹಾಗೂ ವಿಳಾಸಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸಿ ಆಸಿಡ್ ಪಡೆದುಕೊಳ್ಳಬೇಕು ಎಂಬ ನಿಯಮಗಳನ್ನು ರೂಪಿಸಲಾಗುವುಗುದು ಎಂದು ಕೇಂದ್ರ ತನ್ನ ವರದಿಯಲ್ಲಿ ತಿಳಿಸಿದೆ.  

ಮುಕ್ತ ಮಾರುಕಟ್ಟೆಯಲ್ಲಿ ಸುಲಭವಾಗಿ ಆಸಿಡ್ ದೊರೆಯುತ್ತಿರುವುದರಿಂದ ಆಸಿಡ್ ದಾಳಿ ಪ್ರಕರಣಗಳು ರಾಷ್ಟ್ರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಈ ಕುರಿತಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಜುಲೈ 9 ರಂದು ಸುಪ್ರೀಂಕೋರ್ಟ್ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.