ಈಗಿನ ಸುದ್ದಿ

ಇಶ್ರತ್ ಕೊಲೆ ಪ್ರಕರಣದಲ್ಲಿ 9 ಪೊಲೀಸರು ಭಾಗಿ: ಸಿಬಿಐ ಆರೋಪ

Published On :

ಅಹಮದಾಬಾದ್: ಇಶ್ರತ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಭಾಗಿಯಾಗಿದ್ದ 9 ಪೊಲೀಸರು ಇಶ್ರತ್ ಎನ್‌ಕೌಂಟರ್ ಕಾರ್ಯಚರಣೆಗೂ ಮುನ್ನ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದಾರೆಂದು ಎಂದು ಸಿಬಿಐ ಆರೋಪಿಸಿದೆ.

ಇಶ್ರತ್ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ 9 ಪೊಲೀಸರು ಕಾರ್ಯಾಚರಣೆಗೆ ಮುನ್ನ ಸಚಿವರೊಡನೆ ಚರ್ಚಿಸಿರುವ ಧ್ವನಿ ಮುದ್ರಿತ ದಾಖಲೆಯನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪ್ರಕರಣದ ಆರೋಪಿ ಹಾಗೂ ಅಮಾನತುಗಗೊಂಡಿರುವ ಐಪಿಎಸ್ ಅಧಿಕಾರಿ ಜಿ.ಎಲ್. ಸಿಂಘಾಲ್ ಅವರು, ಎನ್‌ಕೌಂಟರ್‌ಗೂ ಮುನ್ನ ರಾಜ್ಯ ಗೃಹ ಸಚಿವ ಅಮಿತ್ ಶಾ ಹಾಗೂ ಪೊಲೀಸರೊಂದಿಗೆ ಚರ್ಚಿಸಿದ್ದ ದೂರವಾಣಿ ಕರೆಗಳ ಧ್ವನಿ ಮುದ್ರಿತ ಪೆನ್‌ಡ್ರೈಗಳನ್ನು ನ್ಯಾಯಾಲಯಕ್ಕೆ ಸಿಬಿಐ ನೀಡಿದೆ.

ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಗೆ ಸಂಬಂಧಿಸಿದಂತೆ, ಮಹಾ ನ್ಯಾಯವಾಧಿ ಖಾಸಗಿ ಕಚೇರಿಯಲ್ಲಿ ಇಂದು ಸಭೆ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಶ್ರತ್ ಎನ್‌ಕೌಂಟರ್ ಕಾರ್ಯಚರಣೆಗೆ ಪೊಲೀಸರ ರೂಪಿಸಲಾಗಿದ್ದ ಅಂಶಗಳನ್ನು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಇಶ್ರತ್ ಎನ್‌ಕೌಂಟರ್ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಗುಜರಾತ್ ಹೈಕೋರ್ಟ್ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.