ಬಾಲಾಪರಾಧಿ ವಯೋಮಿತಿ ಇಳಿಕೆಗೆ ಸುಪ್ರೀಂ ನಕಾರ

ನವದೆಹಲಿ: ಹೇಯ ಕೃತ್ಯಗಳಲ್ಲಿ ಭಾಗಿಯಾಗುವ ಬಾಲಾಪರಾಧಿಗಳ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸುವುದಕ್ಕೆ ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕಳೆದ ಡಿಸೆಂಬರ್ 16ರಂದು ದೆಹಲಿಯಲ್ಲಿ ನಡೆದ ಸಾಮೂಹಿತ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಅಪ್ರಾಪ್ತ ಆರೋಪಿ ಇರುವ ಹಿನ್ನೆಲೆಯಲ್ಲಿ, ಇಂತಹ ಹೀನಾಯ ಕತ್ಯಗಳಲ್ಲಿ ಭಾಗಿಯಾಗುವ ಅಪ್ರಾಪ್ತ ವಯಸ್ಕರನ್ನು ಕಾನೂನಿನ ಅಡಿಯಲ್ಲಿ ರಕ್ಷಿಸಬಾರದು ಎಂದು ಒತ್ತಾಯಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದವು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ನೇತೃತ್ವದ ಸುಪ್ರೀಂ ಪೀಠ,ಬಾಲಾಪರಾಧಿಗಳ ವಯಸ್ಸನ್ನು 18 ವರ್ಷದಿಂದ 16 ವರ್ಷಕ್ಕೆ ಇಳಿಸಲು ನಿರಾಕರಿಸಿದೆ.
ಈಗೀರುವ ಬಾಲಾಪರಾಧ ನ್ಯಾಯ ಕಾಯ್ದೆಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೆ ಬಾಲಾಪರಾಧ ನ್ಯಾಯ ಕಾಯ್ದೆಯ ವಿಧಿಗಳನ್ನು ನಾವು ಎತ್ತಿ ಹಿಡಿಯುತ್ತೇವೆ. ಹಾಗೂ ಕಾಯ್ದೆಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಮಕ್ಕಳ ಹಕ್ಕು ಸಂರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಅಮೋದ್ ಕಾಂತ್ ಸೇರಿದಂತೆ ಹಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಕಳೆದ ಡಿಸೆಂಬರ್ 16ರಂದು ದೆಹಲಿಯ ಚಲಿಸುತ್ತಿದ್ದ ಬಸ್ಸಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಒಬ್ಬ ಅಪ್ರಾಪ್ತ ವಯಸ್ಕ ಸೇರಿದಂತೆ 6 ಜನರ ಗುಂಪೊಂದು 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡಿ, ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು.
ಅತ್ಯಾಚಾರಕ್ಕೆ ಒಳಗಾದ ಯುವತಿ ಡಿಸೆಂಬರ್ 29 ರಂದು ಸಿಂಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


