ಪ್ರತಿಭಟನಾಕಾರರಿಂದ ಬಿಎಸ್‌ಎಫ್ ಕ್ಯಾಂಪ್ ಮೇಲೆ ದಾಳಿ: 4 ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಮಬನ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ಹಾಗೂ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮಬನ್ ಜಿಲ್ಲೆಯಲ್ಲಿನ ಮಸೀದಿಯೊಂದನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರ ಗುಂಪೊಂದು ಗಡಿ ಭದ್ರತಾ ಪಡೆಯ ಕ್ಯಾಂಪ್ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ಪಡೆಯ ಸಿಬ್ಬಂದಿಗಳು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸರ ಗುಂಡಿಗೆ ನಾಲ್ಕು ಮಂದಿ ಪ್ರತಿಭಟನಕಾರರು ಬಲಿಯಾಗಿದ್ದಾರೆ.
ಪ್ರತಿಭಟನಕಾರರು ಏಕಾಏಕಿ ಕ್ಯಾಂಪ್ ಮೇಲೆ ದಾಳಿ ಮಾಡಿದ್ದರಿಂದ ಗುಂಪನ್ನು ಚದುರಿಸಲು ಭದ್ರತಾ ಪಡೆ ಸಿಬ್ಬಂದಿ ಅನಿವಾರ್ಯವಾಗಿ ಗುಂಡು ಹಾರಿಸಿದ್ದಾರೆ. ಇದರಿಂದಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಅಲ್ಲದೆ 5 ಮಂದಿಗೆ ಗುಂಡು ತಗುಲಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನಕಾರರ ದಾಳಿಯಿಂದಾಗಿ ಬಿಎಸ್‌ಎಫ್‌ನ ಹಲವು ಸಿಬ್ಬಂದಿಗಳಿಗೂ ಗಾಯಗಳಾಗಿದೆ. ಈ ಘಟನೆಯಿಂದಾಗಿ ರಾಮಬನ್‌ನಲ್ಲಿ ಉದ್ರಿಗ್ನ ವಾತವಾರಣ ಸೃಷ್ಟಿಯಾಗಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಪ್ರತಿಭಟನಕಾರರ ಮೇಲೆ ಗುಂಡು ಹಾರಿಸಿದ ಭದ್ರತಾ ಪಡೆಗಳ ಕ್ರಮವನ್ನು ವಿರೋಧಿಸಿರುವ ಪ್ರತಿಭಟನಕಾರರು ಜಮ್ಮು ಕಾಶ್ಮೀರದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪೂರ್ಣ ಬಂದ್ ಮಾಡಿದ್ದಾರೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರುವ ಸಲುವಾಗಿ ರಾಜ್ಯ ಗೃಹ ಸಚಿವ ಸಾಜದ್ ಕಿಟ್ಚ್‌ಲೋ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

