ಲೋಕಸಭಾ ಚುನಾವಣೆಗೆ 15 ಪ್ರಚಾರ ಸಮಿತಿ ರಚನೆ: ಬಿಜೆಪಿ
ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಲು ಸಜ್ಜಾಗಿರುವ ಬಿಜೆಪಿ, ದೇಶಾದ್ಯಂತ ಪ್ರಚಾರ ನಡೆಸಲು 15 ಉಪ ಪ್ರಚಾರ ಸಮಿತಿಗಳ ರಚನೆಗೆ ಗುರುವಾರ ತೀರ್ಮಾನಿಸಿದೆ.
ಇಂದು ನಡೆದ ಬಿಜೆಪಿ ಸಂಸದಿಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಬಿಜೆಪಿ ಪ್ರಚಾರ ಸಮಿತಿಯ ಅಧ್ಯಕ್ಷ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಸಮಿತಿಗಳು ಪ್ರಚಾರ ಕಾರ್ಯ ನಿರ್ವಹಿಸಲಿದೆ.
ಆಗಸ್ಟ್ 5 ರಂದು ಪ್ರಾರಂಭವಾಗುವ ಮುಂಗಾರು ಅಧಿವೇಶನವನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರಗಳನ್ನು ರೂಪಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ ಪಕ್ಷದ ಹಿರಿಯ ನಾಯಕರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಕುರಿತಾಗಿ
ಬಿಜೆಪಿ ಪ್ರಚಾರ ಸಮಿತಿಯ ಅಧ್ಯಕ್ಷ ಮೋದಿ ಅವರು ಅಣತಿಯಂತೆ ಸಮಿತಿಗಳು ಕಾರ್ಯನಿರ್ವಹಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. ಅಲ್ಲದೆ ಪಕ್ಷದ ಹಿರಿಯ ನಾಯಕರಾದ ಅರುಣ್ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್ ಅವರಿಗೆ ವಲಯದ ಪ್ರಚಾರ ಸಮಿತಿಯ ನಾಯಕತ್ವ ನೀಡುವ ಕುರಿತಾಗಿ ನಿರ್ಧರಿಸಿಲ್ಲ ಎಂದರು.
ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರತಿಯೊಬ್ಬರನ್ನು ಗಣನೆಗೆ ತೆಗೆದುಕೊಂಡು ಪ್ರಚಾರ ಕಾರ್ಯಕ್ಕೆ ಅಣಿಯಾಗುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಮೋದಿ ಅವರಿಗೆ ಸೂಚಿಸಿತ್ತು. ಅಲ್ಲದೆ ಎಲ್ಲರು ಒಟ್ಟಾಗಿ ಶ್ರಮಿಸಿದರೇ ಮಾತ್ರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುಲು ಸಾಧ್ಯವಾಗುತ್ತದೆ ಎಂದು ಆರ್ಎಸ್ಎಸ್ ಹೇಳಿದೆ.
ಇಂದು ನಡೆದ ಬಿಜೆಪಿ ಸಂಸದಿಯ ಸಭೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ, ಪ್ರಚಾರ ಸಮಿತಿಯ ಅಧ್ಯಕ್ಷ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಹಾಗೂ ವೆಂಕಯ್ಯ ನಾಯ್ಡು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

