ವಿಷಪೂರಿತ ಆಹಾರ ಸೇವನೆಯಿಂದ ಮಕ್ಕಳ ಸಾವು: ಬಿಹಾರ ಸರ್ಕಾರ
ಪಾಟ್ನಾ: ಶಾಲೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಬಿಸಿಯೂಟ ಸೇವಿಸಿದ 23 ಶಾಲಾ ಮಕ್ಕಳು ಸಾವನ್ನಿಪ್ಪಿದ್ದಾರೆಂದು ಬಿಹಾರ ಸರ್ಕಾರ ಗುರುವಾರ ಆರೋಪಿಸಿದೆ.
ವಿಷಕಾರಕ ಅಂಶಗಳು ಮಕ್ಕಳ ದೇಹದಲ್ಲಿ ಸೇರಿದ್ದರಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪೋಸ್ಟ್ಮಾರ್ಟಮ್ ವರದಿಯಲ್ಲಿ ತಿಳಿದುಬಂದಿದೆ.
ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಅಮರ್ಜಿತ್ ಸಿನ್ಹಾ ಅವರು, ಶಾಲೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಹಾಗೂ ಆಹಾರ ಸಂಗ್ರಹಣೆಯ ವಿಧಾನ ಸಂಬಂಧ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ ಇರುವುದು ದುರಂತಕ್ಕೆ ಕಾರಣವಾಗಿದೆ ಎಂದು ದೂಷಿಸಿದ್ದಾರೆ.
ದುರಂತಕ್ಕೆ ಸಂಬಂಧಿಸಿದಂತೆ ಇಂದು ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು, ಮಕ್ಕಳು ಸೇವಿಸಿದ ಆಹಾರದಲ್ಲಿ ಕ್ರಿಮಿನಾಶಕ ಸೇರಿದ್ದರಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಪೋಸ್ಟ್ ಮಾರ್ಟಮ್ ಮಾಡಿದ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಮೇಲ್ವಿಚಾರಕ ಅಮರ್ಕಾಂತ್ ಜಾ ಅವರು, ಬಿಸಿಯೂಟ ತಯಾರಿಕೆಗೆ ಬಳಸಲಾದ ಅಕ್ಕಿ ಅಥವಾ ಅಡುಗೆ ಎಣ್ಣೆಯಲ್ಲಿ ಕ್ರಿಮಿನಾಶಕ ಮಿಶ್ರಣವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

