'ರಮೇಶ್ ಹತ್ಯೆ' ಖಂಡಿಸಿ ಬಿಜೆಪಿ ಪ್ರತಿಭಟನೆ, ತನಿಖೆಗೆ ಆಗ್ರಹ
ಚೆನ್ನೈ: ತಮಿಳುನಾಡಿನ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ರಮೇಶ್ ಅವರ ಹತ್ಯೆಯನ್ನು ಖಂಡಿಸಿರುವ ಬಿಜೆಪಿ, ಪ್ರಕರಣದ ತನಿಖೆಗೆ ಶನಿವಾರ ಆಗ್ರಹಿಸಿದೆ. ಅಲ್ಲದೆ ರಮೇಶ್ ಕೊಲೆಯನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ರಮೇಶ್ ಸಾವಿನ ಸುದ್ದಿ ಕೇಳಿ ಸಿಡಿಲು ಬಡಿದಂತಾಯಿತು ಎಂದು ಟ್ವೀಟ್ ಮಾಡಿರುವ, ಲೋಕಸಭೆ ವಿರೋಧಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು, ತಮಿಳುನಾಡಿನಲ್ಲಿ ಬಿಜೆಪಿ ನಾಯಕರ ಕೊಲೆಯಾಗುತ್ತಿರುವುದು ಮೂರನೇ ಬಾರಿ. ಈ ಎಲ್ಲ ಕೊಲೆ ಪ್ರಕರಣಗಳ ತನಿಖೆಯಾಗಬೇಕು ಮತ್ತು ತಮಿಳುನಾಡು ಸರ್ಕಾರ ಕೊಲೆಪಾತಕಿಗಳನ್ನು ನ್ಯಾಯಾಂಗದ ಕಟಕಟೆಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಈ ಸಂಬಂಧ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರೊಂದಿಗೆ ಮಾತನಾಡಿದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ರಮೇಶ್ ಸಾವಿಗೆ ಸಂತಾಪ ಸೂಚಿಸಿದರು. ಅಲ್ಲದೆ ರಮೇಶ್ ಕೊಲೆ ನನಗೆ ಆಘಾತ ತಂದಿದ್ದು, ಶೀಘ್ರವೇ ದುಷ್ಕರ್ಮಿಗಳಿಗೆ ಶಿಕ್ಷೆಯಾಗಬೇಕೆಂದು ಮೋದಿ ಟ್ವೀಟ್ ಮಾಡಿದ್ದಾರೆ.
ಬರ್ಬರವಾಗಿ ಹತ್ಯೆಗೀಡಾಗಿರುವ ರಮೇಶ್(52) ಅವರ ಕೊಲೆ ಪ್ರಕರಣವನ್ನು ತನಿಖೆ ಮಾಡಬೇಕು. ಹಾಗೂ ದುಷ್ಕರ್ಮಿಗಳನ್ನು ಶೀಘ್ರದಲ್ಲೆ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ನಾಯಕ ಪೊನ್ ರಾಧಾಕೃಷ್ಣನ್ ಅವರು ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸೆಲಂನ ರಮೇಶ್ ಅವರ ಕಚೇರಿ ಎದುರು ಕಳೆದ ರಾತ್ರಿ 10 ಗಂಟೆಯ ಸುಮಾರಿಗೆ ಅಪರಿಚಿತ ವ್ಯಕ್ತಿಗಳು ರಮೇಶ್ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

