ಮಠದ ಮೇಲಿನ ದಾಳಿಗೂ, ಸರ್ಕಾರಕ್ಕೂ ಸಂಬಂಧವಿಲ್ಲ: ಸಿಎಂ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಆದಿ ಚುಂಚನಗಿರಿ ಮಠ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ದಾಳಿಯ ಬಗ್ಗೆ ದೇವನಹಳ್ಳಿಯಲ್ಲಿ ವಾರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಐಟಿ ದಾಳಿಯ ಬಗ್ಗೆ ಆದಿ ಚುಂಚನಗಿರಿ ಮಠದ ಸ್ವಾಮೀಜಿಯೊಂದಿಗೆ ತಾವು ಚರ್ಚಿಸಿದ್ದು, ಇದು ಮಠದ ಮೇಲೆ ನಡೆದ ದಾಳಿಯಲ್ಲ, ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಕ್ಕು ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅಲ್ಲದೆ ಮಠದ ಮೇಲೆ ದಾಳಿ ನಡೆಸುವ ಯಾವುದೇ ಉದ್ದೇಶ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.
ಇನ್ನು ಐಟಿ ದಾಳಿಯನ್ನು ಸ್ವಾಗತಿಸಿರುವ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅವರು, ಮಠದ ಮೇಲೆ ಐಟಿ ದಾಳಿ ನಡೆದಿಲ್ಲ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆದಿದೆ ಎಂದಿದ್ದಾರೆ.
ಸಂವಿಧಾನದ ವ್ಯಾಪ್ತಿಗೆ ಮಠಗಳು ಸೇರ್ಪಡೆಗೊಳ್ಳುತ್ತಿರುವುದರಿಂದ ತಾವು ದಾಳಿಯನ್ನು ಸ್ವಾಗತಿಸುವುದಾಗಿ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ. ಅಲ್ಲದೆ ಮಠ ಮೇಲಿನ ಅಭಿಮಾನದಿಂದಾಗಿ ಜನರು ಪ್ರತಿಭಟನೆ ಮಾಡಿದ್ದಾರೆ ಎಂದು ಮಂಡ್ಯದಲ್ಲಿ ಹೇಳಿಕೆ ನೀಡಿದ್ದಾರೆ.
ಆದಿಚುಂಚನಗಿರಿ ಮಠ ಈ ವರ್ಷದಿಂದ ಆರಂಭಿಸಿರುವ ಬಿಜಿಎಸ್ ವೈದ್ಯ ಕಾಲೇಜು, ಬೆಂಗಳೂರಿನ ಅಂಬೇಡ್ಕರ್ ಮೆಡಿಕಲ್ ಕಾಲೇಜು, ಹಾಗೂ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಶಿಕ್ಷಣ ಸಂಸ್ಥೆ ಹಾಗೂ ಗುಲ್ಬರ್ಗದಲ್ಲಿ ಶಶೀಲ್ ನಮೋಶಿ ಅವರ ಮನೆ ಸೇರಿದಂತೆ 14ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


