ಮೋದಿ ಬಗ್ಗೆ ಉದ್ಧವ್ ಯೂ ಟರ್ನ್, 'ಕೈ'ನಲ್ಲಿಲ್ಲ ಯೋಗ್ಯ ವ್ಯಕ್ತಿ

ನವದೆಹಲಿ: ನಿನ್ನೆಯಷ್ಟೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನಾಯಕತ್ವವನ್ನು ಪರೋಕ್ಷವಾಗಿ ವಿರೋಧಿಸಿದ್ದ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಇಂದು ತಮ್ಮ ವರಸೆ ಬದಲಿಸಿದ್ದಾರೆ.
ದೇಶಕ್ಕೆ ಯೋಗ್ಯ ವ್ಯಕ್ತಿಯ ನಾಯಕತ್ವದ ಅಗತ್ಯ ಇದೆ ಎಂದು ಹೇಳುವ ಮೂಲಕ ಮೋದಿಯನ್ನು ಪರೋಕ್ಷವಾಗಿ ವಿರೋಧಿಸಿದ್ದ ಉದ್ಧವ್, ಇಂದು ತಾವು ಆ ರೀತಿ ಹೇಳಿದ್ದು, ಕಾಂಗ್ರೆಸ್ ನಾಯಕತ್ವದ ಬಗ್ಗೆಯೇ ಹೊರತು ಬೇರೆ ಯಾವ ಪಕ್ಷದ ಬಗ್ಗೆಯೂ ಅಲ್ಲ ಎಂದು ಸ್ಪಷ್ಟಿಕರಣ ನೀಡಿದ್ದಾರೆ.
'ನಾನು ಎಲ್ಲ ಪಕ್ಷಗಳನ್ನು ಗಮನದಲ್ಲಿಟುಕೊಂಡು ಆ ಹೇಳಿಕೆ ನೀಡಿಲ್ಲ. ಕಾಂಗ್ರೆಸ್ನಲ್ಲಿ ಸಮರ್ಥ ನಾಯಕರಿಲ್ಲ' ಎಂದು ಹೇಳಿದ್ದೆ ಎಂದು ಶಿವಸೇನಾ ಮುಖ್ಯಸ್ಥ ಸಮರ್ಥಿಸಿಕೊಂಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಮೋದಿ ಕುರಿತು ಯಾವುದೇ ಹೇಳಿಕೆಗಳನ್ನು ನೀಡಲು ನಿರಾಕರಿಸಿದರು. ಆದರೆ ಎನ್ಡಿಎ ಪ್ರಧಾನಿ ಅಭ್ಯರ್ಥಿ ಬಗ್ಗೆ ಬಿಜೆಪಿ ತನ್ನ ನಿರ್ಧಾರ ಪ್ರಕಟಿಸಿದ ನಂತರ, ತಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸುವುದಾಗಿ ಹೇಳಿದರು.
ಪ್ರಧಾನಿ ಅಭ್ಯರ್ಥಿ ಬಗ್ಗೆ ಮೊದಲು ಬಿಜೆಪಿ ಸಂಸದೀಯ ಮಂಡಳಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿ. ನಂತರ ಆ ಬಗ್ಗೆ ನಾವು ಪ್ರತಿಕ್ರಿಯಿಸುತ್ತೇವೆ. ಅಲ್ಲಿಯವರೆಗೆ ತಾವು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಠಾಕ್ರೆ ತಿಳಿಸಿದರು.
ಇದೇ ವೇಳೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಅಧಿಕಾರಕ್ಕೆ ಬರಲಿದೆ ಎಂದು ಠಾಕ್ರೆ ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


