ಈಗಿನ ಸುದ್ದಿ

2ಜಿ ಹಗರಣ: ಸುಪ್ರೀಂ ಮೆಟ್ಟಿಲೇರಿದ ಅನಿಲ್, ಟೀನಾ

2ಜಿ ಹಗರಣ: ಸುಪ್ರೀಂ ಮೆಟ್ಟಿಲೇರಿದ ಅನಿಲ್, ಟೀನಾ
Published On :

ನವದೆಹಲಿ: ತಮ್ಮನ್ನು ಪ್ರಾಸಿಕ್ಯೂಷನ್ ಪರ ಸಾಕ್ಷಿಯನ್ನಾಗಿಸುವುದಕ್ಕೆ ಒಪ್ಪಿಗೆ ಸೂಚಿಸಿ, ಸಮನ್ಸ್ ಜಾರಿ ಮಾಡಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಿಲಯನ್ಸ್ ಎಡಿಎಜಿ ಅಧ್ಯಕ್ಷ ಅನಿಲ್ ಅಂಬಾನಿ ಹಾಗೂ ಅವರ ಪತ್ನಿ ಟೀನಾ ಅಂಬಾನಿ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಇನ್ನು ಸಿಬಿಐ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಂಬಾನಿ ದಂಪತಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಬುಧವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಕಳೆದ ಶುಕ್ರವಾರ 2 ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಅನಿಲ್ ಹಾಗೂ ಟೀನಾ ಅವರನ್ನು ಪ್ರಾಸಿಕ್ಯೂಷನ್ ಪರ ಸಾಕ್ಷಿಯನ್ನಾಗಿಸಬೇಕು ಎಂಬ ಸಿಬಿಐ ಮನವಿಗೆ ನ್ಯಾಯಾಧೀಶ ಓ.ಪಿ.ಸೈನಿ ಅವರು ಒಪ್ಪಿಗೆ ಸೂಚಿಸಿದ್ದರು.

ರಿಲಯನ್ಸ್ ಎಡಿಎಜಿ ಸ್ವಾನ್ ಟೆಲಿಕಾಂನಲ್ಲಿ ಹೂಡಿಕೆ ಮಾಡಿದೆ ಎನ್ನಲಾಗಿರುವ 990 ಕೋಟಿ ಮೊತ್ತದ ಪ್ರಕರಣದಲ್ಲಿ ಅನಿಲ್ ಅಂಬಾನಿ, ಟೀನಾ ಅಂಬಾನಿ ಮತ್ತು ಇತರ 11 ಮಂದಿ ಪ್ರಕರಣದಲ್ಲಿ ಸಾಕ್ಷ್ಯ ನುಡಿದರೆ ಬಂಡವಾಳ ಹೂಡಿಕೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಲಿದೆ ಎಂದು ಸಿಬಿಐ ವಾದಿಸಿತ್ತು.

ರಿಲಯನ್ಸ್ನಲ್ಲಿ ಅನಿಲ್ ಮತ್ತು ಟೀನಾ ಪ್ರಮುಖ ಸ್ಥಾನ ಹೊಂದಿದ್ದಾರೆ. ಹೀಗಾಗಿ ಅವರು ಹೊಂದಿರುವ ನಕಲಿ ಕಂಪನಿಗಳ ಸಾಕ್ಷ್ಯ ಅನಗತ್ಯ ಎಂದು ಹೇಳುವಂತಿಲ್ಲ ಎಂದು ಸಿಬಿಐನ ವಿಶೇಷ ಕೋರ್ಟ್ ಶುಕ್ರವಾರ ಪ್ರತಿಪಾದಿಸಿತು. ಹೂಡಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ 2011ರಲ್ಲಿ ಒಂದು ಬಾರಿ ವಿಚಾರಣೆ ನಡೆಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.