ಈಗಿನ ಸುದ್ದಿ

ಅಕ್ರಮ ಆಸ್ತಿ: ಮುಲಾಯಂ ವಿರುದ್ಧದ ತನಿಖೆ ಮುಕ್ತಾಯ?

Published On :

ನವದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಪುತ್ರ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿರುದ್ಧದ ಘೋಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಕುರಿತು ಕೇಂದ್ರ ತನಿಖಾ ತಂಡ(ಸಿಬಿಐ) ನಡೆಸುತ್ತಿರುವ ತನಿಖೆ ಮುಕ್ತಾಯ ಹಂತಕ್ಕೆ ತಲುಪಿದೆ.

ಮುಲಾಯಂ ಅವರ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಸಂಬಂಧ ಕೈಗೊಂಡಿರುವ ತನಿಖೆ ಮುಕ್ತಾಯ ಹಂತಕ್ಕೆ ಬಂದಿದ್ದು, ಈ ಸಂಬಂಧ ಹೆಚ್ಚು ದಾಖಲೆಗಳು ದೊರಕ್ಕಿಲ್ಲ ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ.

1993-2005ರ ಅವಧಿಯಲ್ಲಿ ಹೂಡಿಕೆ ಮಾಡಲಾಗಿದ್ದ ಹಣ ಕೆಲವು ಗೊಂದಲವನ್ನು ಸೃಷ್ಟಿಸಿತ್ತು. ಆದರೆ ಅಖಿಲೇಶ್ ಮತ್ತು ಮುಲಾಯಂ ಅವರಿಗೆ ಸಂಬಂಧಿಕರು ನೀಡಿದ್ದ ಸಾಲವನ್ನು ಉಡುಗೊರೆ ಎಂದು ಹೇಳಿ ಕೈಬಿಟ್ಟಿದ್ದಾರೆ. ಇದು ಅವರ ಆದಾಯ ಹೆಚ್ಚಾಗಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಸಿಬಿಐ ಅಧಿಕಾರಿಗಳು ಪ್ರಕರಣ ಸಂಬಂಧ ವಿಚಾರಣೆ ಪೂರ್ಣಗೊಳಿಸಿದ್ದು, ಪ್ರಕರಣವನ್ನು ಮುಚ್ಚಬೇಕೇ ಅಥವಾ ಸಾಮಾನ್ಯ ಪ್ರಕರಣವನ್ನಾಗಿ ಪರಿವರ್ತಿಸಿ ಮತ್ತಷ್ಟು ತನಿಖೆ ಕೈಗೊಳ್ಳಬೇಕಾ ಎಂಬುದರ ಬಗ್ಗೆ ಹಿರಿಯ ಅಧಿಕಾರಿಗಳು ನಿರ್ಧರಿಸಲಿದ್ದಾರೆ. ಕೇವಲ ವಿಚಾರಣೆ ಮುಗಿದಿದ್ದು, ತನಿಖೆ ಮುಕ್ತಾಯ ಹಂತಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಹಿನ್ನಲೆ
ಮುಲಾಯಂ ಕುಟುಂಬದ ವಿರುದ್ಧ ವಿಶ್ವನಾಥ್ ಚತುರ್ವೇದಿ ಎಂಬುವವರು ಅಕ್ರಮ ಆಸ್ತಿ ಗಳಿಕೆಯ ದೂರು ನೀಡಿದ್ದರು. ವಿಶ್ವನಾಥ್ ಚತುರ್ವೇದಿ ಮುಲಾಯಂ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಪ್ರಕರಣ ಸಂಬಂಧ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ 2007ರ ಮಾರ್ಚ್ 1ರಂದು ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.

ಇದು ರಾಜಕೀಯ ದುರುದ್ದೇಶದಿಂದ ಕೂಡಿದ ದೂರು. ಇದಕ್ಕೆ ಸರಿಯಾದ ಸಾಕ್ಷಿ ಇಲ್ಲ. ಉತ್ತರ ಪ್ರದೇಶದ ಸರ್ಕಾರನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷ ಹೂಡಿರುವ ತಂತ್ರ ಎಂದು ಹೇಳಿ ಮುಲಾಯಂ ಮೇಲ್ಮನವಿ ಸಲ್ಲಿಸಿದ್ದರು.

ತೀರ್ಪು ಕಾಯ್ದಿರಿಸಿದ್ದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್‌ನಲ್ಲಿ ತನಿಖೆ ಮುಂದುವರಿಸುವಂತೆ ಸಿಬಿಐಗೆ ಆದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.