ಈಗಿನ ಸುದ್ದಿ

ಪಶ್ಚಿಮ ಬಂಗಾಳ ಚುನಾವಣೆ ಹಿಂಸಾಚಾರ: ಆರು ಸಾವು

Published On :

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ 4ನೇ ಹಂತದ ಚುನಾವಣೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಮಹಿಳೆ ಸೇರಿದಂತೆ ಆರು ಜನ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಆದರೆ ಇಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ಕು ಹಂತಗಳಲ್ಲಿ ಶೇ 25ರಷ್ಟು ಮತಚಲಾವಣೆ ಆಗಿದ್ದ್ದು, ಹಿಂಸಾಚಾರ ಮುಂದುವರೆದಿದೆ. ಬಿರ್‌ಭಮ್ ಜಿಲ್ಲೆಯಲ್ಲಿ ಮತದಾನ ಆರಂಭಗೊಳ್ಳುವ ಮುನ್ನವೇ ಇಬ್ಬರು ವ್ಯಕ್ತಿಗಳು ಸಗಣಿಯಲ್ಲಿ ಬಾಂಬ್ ಇಡುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡು ಆ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ದಿಬಸಿಶ್ ನಂದಿ ಹೇಳಿದ್ದಾರೆ.

ಇದೇ ಜಿಲ್ಲೆಯ ಮತ್ತೊಂದು ಹಳ್ಳಿಯಲ್ಲಿ ಮತದಾನದ ನಡೆಯುತ್ತಿರುವ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಬಾಂಬ್ ಇಡುತ್ತಿರಬೇಕಾದರೆ ಸ್ಫೋಟಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ ಚಲಾಯಿಸಿ ಬರುತ್ತಿದ್ದ ಮಹಿಳೆಯು ಸ್ಫೋಟಕ್ಕೆ ಬಲಿಯಾಗಿದ್ದಾಳೆ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೇ ಮತ ಚಲಾವಣೆ ನಿಧಾನಗತಿಯಲ್ಲಿ ಸಾಗುತ್ತಿದ್ದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಕೆಲ ಕಿಡಿಗೇಡಿಗಳು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನು ತಡೆಯಲು ಮುಂದಾದ ಸಿಆರ್‌ಪಿಎಫ್ ಸಿಬ್ಬಂದಿಗಳ ಮೇಲೆ ಕಲ್ಲು ಎಸೆದ ಪರಿಣಾಮ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.