ಈಗಿನ ಸುದ್ದಿ

ಆಡ್ವಾಣಿಯೇ ಪ್ರಧಾನಿಯಾಗಲಿ: ಶತ್ರುಘ್ನ ಸಿನ್ಹಾ

ಆಡ್ವಾಣಿಯೇ ಪ್ರಧಾನಿಯಾಗಲಿ: ಶತ್ರುಘ್ನ ಸಿನ್ಹಾ
Published On :

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಬಾವುಟ ಹಾರಿಸಿರುವ ಹಿರಿಯ ಬಾಲಿವುಡ್ ನಟ ಹಾಗೂ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಅವರು, ಪಕ್ಷ ಅಧಿಕಾರಕ್ಕೆ ಬಂದರೆ ಎಲ್.ಕೆ.ಆಡ್ವಾಣಿ ಅವರೇ ಪ್ರಧಾನಿಯಾಗಲಿ ಎಂದು ಒತ್ತಾಯಿಸಿದ್ದಾರೆ.

ಆಡ್ವಾಣಿ ಅವರ ಕಟ್ಟಾ ಬೆಂಬಲಿಗರಾಗಿರುವ ಸಿನ್ಹಾ ಅವರು, ಸುಷ್ಮಾ ಸ್ವರಾಜ್ ಹಾಗೂ ಯಶವಂತ್ ಸಿನ್ಹಾ ರಂತಹ ಹಿರಿಯ ನಾಯಕರನ್ನು ಕಡೆಗಣಿಸಿ, ಮೋದಿ ಅವರನ್ನು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದು ಸರಿಯಲ್ಲ ಎಂದಿದ್ದಾರೆ.

ಇನ್ನು ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿನ್ಹಾ, ಬಿಜೆಪಿ ಸಂಸದೀಯ ಮಂಡಳಿ ಆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಮೋದಿ ಒಬ್ಬ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿರಬಹುದು. ಆದರೆ, ಅತ್ಯಂತ ಹಿರಿಯ ನಾಯಕರಾದ ಆಡ್ವಾಣಿ ಅವರೇ ಪಕ್ಷದ ನೇತೃತ್ವ ವಹಿಸಿಕೊಳ್ಳಬೇಕು. ಪಕ್ಷಕ್ಕಾಗಿ ತಮ್ಮ ಜೀವನವನ್ನೇ ಮುಡುಪಿಟ್ಟ ಆಡ್ವಾಣಿಗಿಂತ ಸೂಕ್ತ ವ್ಯಕ್ತಿ ಬೇರೆ ಇಲ್ಲ. ಅವರನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂದು ಸಿನ್ಹಾ ಆಗ್ರಹಿಸಿದರು.

ಮೋದಿ ಒಬ್ಬ ಜನಪ್ರಿಯ ನಾಯಕ ಹಾಗೂ ಸ್ನೇಹಿತ, ಒಂದು ವೇಳೆ ಸಂಸದೀಯ ಮಂಡಳಿಯ ಸಭೆಯಲ್ಲಿ ಅವರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದರೆ, ಅದೊಂದು ಅಸಾಧಾರಣ ಅಷ್ಟೆ, ಆದರೆ ಆಡ್ವಾಣಿ ಅವರೇ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬುದು ನಮ್ಮ ಅಭಿಪ್ರಾಯ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.