ಗಡಿಪ್ರದೇಶದಲ್ಲಿ ಭಾರತ-ಚೀನಾ ಶಾಂತಿ ಮಾತುಕತೆ
ನವದೆಹಲಿ: ಲಡಾಖ್‌ನ ಚೂಮರ್ ಪ್ರದೇಶದಲ್ಲಿ ಚೀನಾ ಸೇನೆ ಅಕ್ರಮವಾಗಿ ಒಳನುಸುಳಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾ ಮಂಗಳವಾರ ಶಾಂತಿ ಮಾತುಕತೆಯನ್ನು ನಡೆಸಲು ಮುಂದಾಗಿದೆ. ಮಂಗಳವಾರ ಆರಂಭವಾದ ಈ ಮಾತುಕತೆ ಇನ್ನೆರಡು ದಿನಗದಳ ವರೆಗೆ ನಡೆಯಲಿದೆ.
ಭಾರತ ಮತ್ತು ಚೀನಾ ಗಡಿಪ್ರದೇಶದಲ್ಲಿನ ಸಹಭಾಗಿತ್ವ ಮತ್ತು ಕಾರ್ಯಕಲಾಪಗಳ ಬಗ್ಗೆ ಇಲ್ಲಿ ಮಾತನಾಡಲಾಗುವುದು. ಈ ಮಾತುಕತೆಯಲ್ಲಿ ವಿದೇಶಾಂಗ ಸಚಿವಾಲಯದ ಜತೆ ಕಾರ್ಯದರ್ಶಿ (ಪೂರ್ವ ಏಷ್ಯಾ) ಗೌತಂ ಬಂಬಾವಾಲೆ ಭಾರತವನ್ನು ಪ್ರತಿನಿಧೀಕರಿಸಲಿದ್ದಾರೆ. ಇವರ ಜತೆಗೆ ರಕ್ಷಣಾ ಹಾಗು ಗೃಹ ಸಚಿವಾಲಯದ ಪ್ರತಿನಿಧಿಗಳು ಈ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಹಿಂದೆ ಮಾರ್ಚ್ 2012 ಮತ್ತು 2012, ನವಂಬರ್‌ನಲ್ಲಿ ಇಂಡೋ ಚೀನಾ ಮಾತುಕತೆ ನಡೆದಿತ್ತು.
ನವಂಬರ್ 2012ರ ನಂತರ ಭಾರತ-ಚೀನಾ ಗಡಿಪ್ರದೇಶದಲ್ಲಿ ನಡೆಯುವ ಕಾರ್ಯ ಕಲಾಪಗಳಲ್ಲಿ ಶಾಂತಿ ಮತ್ತು ಸಮಾಧಾನವನ್ನು ಕಾಪಾಡಿಕೊಂಡು ಬಂದಿರುವ ಬಗ್ಗೆ ಹಾಗು ಅಲ್ಲಿನ ಸಮಸ್ಯೆಗಳ ಬಗ್ಗೆ ಈ ಮಾತುಕತೆಯಲ್ಲಿ ವಿಚಾರ ವಿನಿಮಯ ಮಾಡಲಾಗುವುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಸಯ್ಯದ್ ಅಕ್ಬರುದ್ದೀನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

