ಚಿತ್ರದುರ್ಗದ ಚೇತನಾ ಸ್ಥಿತಿ ಚಿಂತಾಜನಕ

ಬೆಂಗಳೂರು: ಓವರ್ ಡೋಸ್‌ನಿಂದ ಕಳೆದ 11 ದಿನಗಳಿಂದ ಕೋಮಾ ಸ್ಥಿತಿಯಲ್ಲಿರುವ ಚಿತ್ರದುರ್ಗದ ಚೇತನಾ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ನಿಮ್ಹಾನ್ಸ್ ಆಸ್ಪತ್ರೆಯ ಅಧೀಕ್ಷಕ ಡಾ.ಸತೀಶ್ ಅವರು ಗುರುವಾರ ಹೇಳಿದ್ದಾರೆ.
ಈ ಮುಂಚೆ ಅವರಿಗೆ ನಾಯಿ ಕಚ್ಚಿದ್ದರಿಂದ ಮತ್ತು ಓವರ್ ಡೋಸ್‌ನಿಂದಾಗಿ ಅವರ ಮೆದುಳಿಗೆ ಸೋಂಕು ತಗುಲಿದೆ. ಹೀಗಾಗಿ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸತೀಶ್ ಅವರು ತಿಳಿಸಿದ್ದಾರೆ.
ಈ ಮಧ್ಯೆ ಓವರ್ ಡೋಸ್ ನೀಡಿದ ಚಿತ್ರದುರ್ಗದ ಕೃಷ್ಣ ಆಸ್ಪತ್ರೆಯ ವೈದ್ಯ ಡಾ.ದೀಪಕ್ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ಚಿಕಿತ್ಸೆಯನ್ನು ವೈಜ್ಞಾನಿಕವಾಗಿಯೇ ನೀಡಿದ್ದೇನೆ ಎಂದಿದ್ದಾರೆ. ಅಲ್ಲದೆ ಚೇತನಾ ಅವರ ಕಡೆಯಿಂದ ತಮಗೆ ಜೀವ ಬೆದರಿಕೆ ಇತ್ತು, ಹೀಗಾಗಿ ಇಷ್ಟು ದಿನ ಸ್ಪಷ್ಟಿಕರಣ ನೀಡಲು ತಮಗೆ ಸಾಧ್ಯವಾಗಿರಲಿಲ್ಲ ಎಂದು ಸಹ ಅವರು ಹೇಳಿದ್ದಾರೆ.
ಚಳಿ, ಜ್ವರದಿಂದಾಗಿ ಚೇತನಾ ಅವರು ಜುಲೈ 14ರಂದು ಚಿತ್ರದುರ್ಗದ ಕೃಷ್ಣಾ ಆಸ್ಪತ್ರೆಗೆ ದಾಖಲಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


