ಈಗಿನ ಸುದ್ದಿ

ದೆಹಲಿ ಗ್ಯಾಂಗ್ ರೇಪ್: ಆ.5ಕ್ಕೆ ತೀರ್ಪು ಮುಂದೂಡಿಕೆ

ದೆಹಲಿ ಗ್ಯಾಂಗ್ ರೇಪ್: ಆ.5ಕ್ಕೆ ತೀರ್ಪು ಮುಂದೂಡಿಕೆ
Published On :

ನವದೆಹಲಿ: ಇಂದು ಪ್ರಕಟವಾಗಬೇಕಿದ್ದ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೊದಲ ತೀರ್ಪು ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 5ರಂದು ತೀರ್ಪು ಪ್ರಕಟಿಸುವುದಾಗಿ ಬಾಲಾಪರಾಧ ನ್ಯಾಯಾಲಯ ಗುರುವಾರ ಹೇಳಿದೆ.

ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಆರೋಪಿತ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸಂಬಂಧಿಸಿದ ತೀರ್ಪನ್ನು ಬಾಲ ನ್ಯಾಯ ಮಂಡಳಿ ಇಂದು ಪ್ರಕಟಿಸಬೇಕಿತ್ತು. ಈ ಮುಂಚೆ ಜುಲೈ 11ಕ್ಕೆ ಪ್ರಕಟವಾಗಬೇಕಿದ್ದ ತೀರ್ಪುನ್ನು ನ್ಯಾಯಮಂಡಳಿ ಜುಲೈ 25ಕ್ಕೆ ನಿಗದಿಪಡಿಸಿತ್ತು. ಆದರೆ ಇಂದು ಸಹ ತೀರ್ಪು ಪ್ರಕಟಿಸಿದ ಕೋರ್ಟ್, ತೀರ್ಪನ್ನು ಮತ್ತೆ ಆಗಸ್ಟ್ 5ಕ್ಕೆ ಮುಂದೂಡಿದೆ.

ಕಳೆದ ಡಿ.16ರಂದು 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಚಲಿಸುತ್ತಿದ್ದ ಬಸ್ಸಿನಲ್ಲೇ ಅತ್ಯಾಚಾರ ಎಸಗಲಾಗಿತ್ತು. ಈ ವೇಳೆ ತೀವ್ರ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿನಿ ಡಿ. 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ವಯಸ್ಕ ಸೇರಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ಪ್ರಮುಖ ಆರೋಪಿ ರಾಮ್‌ಸಿಂಗ್ ಜೈಲಿನೊಳಗೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.