ಈಗಿನ ಸುದ್ದಿ

ನರೇಂದ್ರ ಮೋದಿ ಅಮೆರಿಕದಲ್ಲೇ ನೆಲೆಸುವುದು ಒಳಿತು

Published On :

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಅಮೆರಿಕ ವೀಸಾ ನೀಡಬಾರದು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಸಂಸದರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಶೀದ್ ಆಲ್ವಿ, ಈ ವಿಷಯ ಅಮೆರಿಕದ ಆಂತರಿಕ ವ್ಯವಹಾರಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ.

ಈ ಪತ್ರದ ಹಿಂದಿರುವ ಉದ್ದೇಶ ಏನು ಎಂದು ನನಗೆ ಗೊತ್ತಾಗುತ್ತಿಲ್ಲ. ವೀಸಾ ನೀಡಬೇಡಿ ಎಂಬುದಕ್ಕೆ ನೀವು ಯಾಕೆ ಅಮೆರಿಕದ ಅಧ್ಯಕ್ಷ ಒಬಾಮ ಅವರಿಗೆ ಪತ್ರ ಬರೆಯಬೇಕು? ಅದು ಅಮೆರಿಕದ ಆಂತರಿಕ ವ್ಯವಹಾರಕ್ಕೆ ಸಂಬಂಧಪಟ್ಟದ್ದು. ನರೇಂದ್ರ ಮೋದಿಜಿ ಅವರಿಗೆ ವೀಸಾ ನೀಡಿದರೆ ಅದೊಂದು ದೊಡ್ಡ ವಿಷಯವೇ ಅಲ್ಲ. ಅವರು ಅಮೆರಿಕಕ್ಕೆ ಭೇಟಿ ನೀಡುತ್ತಾರೆಯೇ? ಇಲ್ಲವೇ? ಎಂಬುದರ ಬಗ್ಗೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು? ಅಮೆರಿಕ ಅವರಿಗೆ ವೀಸಾ ನೀಡುತ್ತದೆಯೇ? ಇಲ್ಲವೇ? ಎಂಬುದರ ಬಗ್ಗೆ ನಾವ್ಯಾಕೆ ಚಿಂತಿಸಬೇಕು? ಎಂದು ಆಲ್ವಿ ಪ್ರಶ್ನಿಸಿದ್ದಾರೆ.

ಅದೇ ವೇಳೆ ಮೋದಿ ವಿರುದ್ಧ ವಾಗ್ದಾಳಿ ಮಾಡಿದ ಆಲ್ವಿ, ನಾವು ಭಾರತದಲ್ಲಿ ಮೋದಿಯನ್ನು ಸಹಿಸಿಕೊಂಡು ಹೋಗುತ್ತಿದ್ದೇವೆ. ಇದಕ್ಕಿಂತ ಅವರು ಅಮೆರಿಕದಲ್ಲೇ ನೆಲೆಸುವುದು ಉತ್ತಮ ಎಂದು ಹೇಳಿದ್ದಾರೆ.

ಮೋದಿಯವರಿಗೆ ವೀಸಾ ನಿರಾಕರಿಸಿ ಎಂದು ಸಂಸದರು ಒಬಾಮಗೆ ಬರೆದ ಪತ್ರದಲ್ಲಿ ಸಂಸದರ ನಕಲಿ ಸಹಿ ಬಳಸಲಾಗಿದೆ ಎಂದು ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಪತ್ರದ ಸತ್ಯಾಸತ್ಯತೆಯನ್ನು ಇದೀಗ ಒರೆಗೆ ಹಚ್ಚಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.