ಈಗಿನ ಸುದ್ದಿ

ಜೀನ್ಸ್, ಹೊರತಿಂಡಿ ನಿಷೇಧ ಹಿಂಪಡೆದ ಎಎಂಯು

Published On :

ಲಖನೌ: ಟಿ-ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಧರಿಸಬಾರದು, ಸಿನಿಮಾ ನೋಡಬಾರದು ಎಂದು ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರಿಗೆ ಹೇರಲಾಗಿದ್ದ ನಿಷೇಧವನ್ನು ಅಲಿಗರ್ ಮುಸ್ಲಿಂ ವಿಶ್ವವಿದ್ಯಾಲಯ(ಎಎಂಯೂ) ಶನಿವಾರ ಹಿಂಪಡೆದಿದೆ.

ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಸಿನೆಮಾ ವಿಕ್ಷಣೆಗೆ, ರೆಸ್ಟೋರೆಂಟ್, ಹೋಟೆಲ್ ಮತ್ತು ಸೈಬರ್‌ಗೆ ತೆರಳಬಾರದು ಎಂದು ನಿರ್ಬಂಧ ಹಾಕಲಾಗಿತ್ತು. ಎಲ್ಲಾ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಮಾತನಾಡಲು ಕೇವಲ ಒಂದು ಮೊಬೈಲ್ ಫೋನ್ ಬಳಕೆ ಮಾಡಬೇಕು ಎಂದು ವಸತಿ ನಿಲಯಗಳ ಮುಖ್ಯಾಧಿಕಾರಿ ಡಾ. ಗಜಲ್ ಪರ್ವೀನ್ ಸೂಚಿಸಿದ್ದರು.

ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದ ಆದೇಶವನ್ನು ಮುರಿದರೆ ಅವರಿಗೆ 500ರೂ ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಸಿದ್ದರು.

ಈ ಆದೇಶಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಎಂಯು, ಗಜಲಾ ಪರ್ವೀನ್ ಅವರಿಂದ ವಿದ್ಯಾರ್ಥಿನಿಯರಿಗೆ ಕೇವಲ ಸಲಹೆ ನೀಡಲಾಗಿದೆ ಹೊರತು ಯಾವುದೇ ಆದೇಶ ಹೊರಡಿಸಿಲ್ಲ. ವಿದ್ಯಾರ್ಥಿನಿಯರು ಈ ಆದೇಶವನ್ನು ಪಾಲಿಸಬೇಕೆಂದು ಅಧಿಕೃತವಾಗಿ ಹೇಳಿಲ್ಲ. ವಸತಿ ನಿಲಯಗಳ ಮುಖ್ಯಾಧಿಕಾರಿಯಾಗಿರುವ ಪರ್ವೀನ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಸೂಚಿಸಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.