ಇಶ್ರತ್ ಪ್ರಕರಣ: ಐಪಿಎಸ್ ಅಧಿಕಾರಿ ಪಿಪಿ ಪಾಂಡೆ ಆಸ್ಪತ್ರೆಗೆ ದಾಖಲು
ಅಹಮದಬಾದ್: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಐಪಿಎಸ್ ಅಧಿಕಾರಿ ಪಿಪಿ ಪಾಂಡೇ ಅವರು ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆ ನೋವಿನಿಂದ ಬಳಲುತಿದ್ದ ಪಾಂಡೆ ಅವರು ಸೋಮವಾರ ಬೆಳಿಗ್ಗೆ ಶಹಿಬಾಗ್ ಏರಿಯಾದಲ್ಲಿರುವ ಚಂದ್ರಮಣಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆ ಸಂಬಂಧ ಜುಲೈ 29ರಂದು ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿ ಪಾಂಡೆ ಅವರಿಗೆ ಸೂಚಿಸಿತ್ತು.
2004ರಲ್ಲಿ ಇಶ್ರತ್ ಜಹಾನ್ ಮತ್ತು ಸಹಚರರಾದ ಜಾವೇದ್ ಶೈಖ್, ಅಮಜಡಲ್ಲಿ ಅಕ್ಬರಲಿ ರಾನಾ ಮತ್ತು ಜೀಶ್ ಜೋಹರ್ ಅವರನ್ನು ನಕಲಿ ಎನ್ಕೌಂಟರ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಪಾಂಡೆ ಅವರು ಅಹಮದಬಾದ್ನ ಅಪರಾಧ ದಳದ ಜಂಟಿ ಆಯುಕ್ತರಾಗಿದ್ದರು.
ಒಂಭತ್ತು ವರ್ಷಗಳ ಹಿಂದಿನ ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಜುಲೈ 4ರಂದು ಗುಜರಾತ್ ಹೈಕೋರ್ಟ್ಗೆ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.
ಇದರಲ್ಲಿ ಪಿಪಿ ಪಾಂಡೆ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಅವರು ತಮ್ಮ ವಿರುದ್ಧದ ದೂರು ಕೈಬಿಡುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

