ಈಗಿನ ಸುದ್ದಿ

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರ ಅಸ್ತು

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರ ಅಸ್ತು
Published On :

ನವದೆಹಲಿ: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಯುಪಿಎ ಸರ್ಕಾರ ಮಂಗಳವಾರ ಒಪ್ಪಿಗೆ ನೀಡಿದೆ.

ಅನೇಕ ವಿರೋಧದ ನಡುವೆಯೂ ತೆಲಂಗಾಣ ರಾಜ್ಯ ರಚನೆಗೆ ಅಧಿಕೃತ ಘೋಷಣೆ ಹೊರಡಿಸಲಾಗಿದ್ದು, ಈ ಮೂಲಕ 29 ರಾಜ್ಯವಾಗಿ ತೆಲಂಗಾಣ ರಚನೆಯಾಗಲಿದೆ.

ಆಂಧ್ರ ಪ್ರದೇಶದ ವಿಭಜನೆಗೆ ಕೇಂದ್ರ ಸಮ್ಮತಿಸಿದ್ದು, ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಒಪ್ಪಿಗೆ ನೀಡಲಾಗಿದೆ.

ಇದಕ್ಕೂ ಮುನ್ನ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಒಪ್ಪಿಗೆ ನೀಡಲಾಗಿತ್ತು. ಸಭೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಕಿರಣ್‌ಕುಮಾರ್ ರೆಡ್ಡಿ ಸೇರಿದಂತೆ ಕೇಂದ್ರ ಸಚಿವ ಸಂಪುಟದ ಸಚಿವರು ಭಾಗವಹಿಸಿದ್ದರು.

ತೆಲಂಗಾಣ, ಸೀಮಾಂಧ್ರ ಮತ್ತು ರಾಯಲಸೀಮೆಗೆ ಕೊಂಡಿಯಾಗಿರುವ ಮುತ್ತಿನ ನಗರಿ ಹೈದ್ರಾಬಾದ್ ನಗರವು ತೆಲಂಗಾಣ ಮತ್ತು ಆಂಧ್ರಪ್ರದೇಶಗಳೆರಡಕ್ಕೂ 10 ವರ್ಷಗಳ ಕಾಲ ಹೈದ್ರಾಬಾದ್ ರಾಜಧಾನಿಯಾಗಲಿದೆ.

ನಾಳೆ ವಿಶೇಷ ಕೇಂದ್ರ ಸಂಪುಟ ಸಭೆ ನಡೆಯಲಿದ್ದು, 10 ಜಿಲ್ಲೆಗಳ ತೆಲಂಗಾಣ ರಚನೆಗೆ ಅನುಮೋದನೆ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.