ಬಾಟ್ಲಾ ಎನ್‌ಕೌಂಟರ್ ಪ್ರಕರಣ: ಶಹಜಾದ್‌ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಐದು ವರ್ಷಗಳ ಹಿಂದಿನ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣದ ಅಪರಾಧಿ ಇಂಡಿಯನ್ ಮುಜಾಹಿದೀನ್ ಕಾರ್ಯಕರ್ತ ಶಹಜಾದ್ ಅಹಮದ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಮಂಗಳವಾರ ದೆಹಲಿ ನ್ಯಾಯಾಲಯ ಶಹಜಾದ್ ಅಹಮದ್‌ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಪೊಲೀಸ್ ಇನ್ಸೆಪೆಕ್ಟರ್ ಎಂ.ಸಿ ಶರ್ಮಾ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಶಹಜಾದ್ ವಿರುದ್ಧ ಇತರೆ ಪೊಲೀಸರ ಹತ್ಯೆ ಪ್ರಯತ್ನ, ಕರ್ತವ್ಯಕ್ಕೆ ಅಡ್ಡಿ, ಕ್ರಿಮಿನಲ್ ಸಂಚು, ಸಾಕ್ಷ್ಯ ನಾಶ ಮತ್ತು ಶಸ್ತ್ರಾಸ್ತ್ರಗಳ ಕಾಯ್ದೆಯಡಿಯೂ ತಪ್ಪಿತಸ್ಥ ಎಂದು ಘೋಷಿಸಿಲಾಗಿದೆ.
2008ರಲ್ಲಿ ನಡೆದ ಈ ಎನ್‌ಕೌಂಟರ್ ವೇಳೆ ದೆಹಲಿ ಪೊಲೀಸ್ ವಿಶೇಷ ಪಡೆಯ ಇನ್ಸ್‌ಪೆಕ್ಟರ್ ಎಂ.ಸಿ ಶರ್ಮಾ ಮೃತಪಟ್ಟಿದ್ದರು. ಶರ್ಮಾ ಉಗ್ರರ ಗುಂಡಿಗೆ ಬಲಿಯಾಗಿದ್ದರೇ ಅಥವಾ ಪೊಲೀಸರ ಗುಂಡು ತಗುಲಿ ಮೃತಪಟ್ಟಿದ್ದರೇ ಎನ್ನುವ ಕುರಿತು ಅನೇಕ ಅನುಮಾನಗಳು ಹುಟ್ಟಿಕೊಂಡಿದ್ದವು. ರಾಜಕೀಯ ವಲಯದಲ್ಲಿ ಈ ಎನ್‌ಕೌಂಟರ್ ಪ್ರಕರಣ ತೀವ್ರ ವಾದ-ವಿವಾದಕ್ಕೆ ಕಾರಣವಾಗಿತ್ತು. ಆದರೆ, ಈಗ ನ್ಯಾಯಾಲಯದ ತೀರ್ಪು ಈ ವಿವಾದಕ್ಕೆ ಕೊನೆ ಹಾಡಿದೆ.
ಪ್ರಕರಣದಲ್ಲಿ ಬಂಧಿತ ಶಹಜಾದ್ ಅಹಮದ್‌ನನ್ನು ನ್ಯಾಯಾಲಯ ಗುರುವಾರ ದೋಷಿ ಎಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


