ನಿತೀಶ್ ಬೆಂಬಲಿಸಿದ ಶತ್ರುಘ್ನ ಸಿನ್ಹಾ ವಿರುದ್ಧ ಕ್ರಮ: ಬಿಜೆಪಿ
ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬೆಂಬಲಿಸಿದ ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಸಿ.ಪಿ ಠಾಕೂರ್ ಬುಧವಾರ ಹೇಳಿದ್ದಾರೆ.
ನಿತೀಶ್ ಕುಮಾರ್ ಅವರು ಪ್ರಧಾನಿ ಅಭ್ಯರ್ಥಿಗೆ ಸೂಕ್ತ ವ್ಯಕ್ತಿ ಎಂದು ನಿನ್ನೆ ಶತ್ರುಘ್ನ ಸಿನ್ಹಾ ಹೇಳಿಕೆ ನೀಡಿದ್ದರು. ಇದಕ್ಕೆ ವಿಷಾಧ ವ್ಯಕ್ತಪಡಿಸಿರುವ ಸಿ.ಪಿ ಠಾಕೂರ್, ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ವಿರುದ್ಧ ಬಿಜೆಪಿಯಲ್ಲಿ ಜಗಳ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ.
ವಿವಾದವನ್ನು ಸೃಷ್ಟಿಸುವಂತಹ ಹೇಳಿಕೆಯನ್ನು ಯಾರೇ ನೀಡಿದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಿನ್ಹಾ ಅವರು ಬಿಜೆಪಿ ಪಕ್ಷವನ್ನು ತೊರೆಯಲು ಸಿದ್ಧರಿದ್ದರೆ ಅವರನ್ನು ಯಾರು ತಡೆಯುವುದಿಲ್ಲ. ಸಿನ್ಹಾ ಅವರು ಇಲ್ಲದಿದ್ದರೆ ಪಕ್ಷಕ್ಕೆ ಯಾವುದೇ ನಷ್ಟ ಉಂಟಾಗುವುದಿಲ್ಲ ಎಂದು ಠಾಕೂರ್ ಕಿಡಿಕಾರಿದ್ದಾರೆ.
ನಿತೀಶ್ ಕುಮಾರ್ ಅವರು ಪ್ರಧಾನಿ ಅಭ್ಯರ್ಥಿಗೆ ಸೂಕ್ತ ವ್ಯಕ್ತಿ. ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯಗಳನ್ನು ದೂರ ಮಾಡಿ ಮತ್ತೆ ಮೈತ್ರಿಯಾಗಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದರು.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಬಾವುಟ ಹಾರಿಸಿರುವ ಶತ್ರುಘ್ನ ಸಿನ್ಹಾ ಅವರು ಇತ್ತೀಚೆಗಷ್ಟೇ ಪಕ್ಷ ಅಧಿಕಾರಕ್ಕೆ ಬಂದರೆ ಎಲ್.ಕೆ. ಆಡ್ವಾಣಿ ಅವರೇ ಪ್ರಧಾನಿಯಾಗಲಿ ಎಂದು ಒತ್ತಾಯಿಸಿದ್ದರು.
ಇದರ ಬೆನ್ನಲ್ಲೇ ಬಿಜೆಪಿಯಿಂದ ಮೈತ್ರಿ ಮುರಿದು ಹೊರ ನಡೆದ ಜೆಡಿಯು ನಾಯಕ ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಗೆ ಸೂಕ್ತ ಎಂದು ಹೇಳುತ್ತಿರುವುದು ಪಕ್ಷದಲ್ಲೇ ಪ್ರಬಲ ನಾಯಕ ಎಂದೆನಿಸಿಕೊಂಡಿರುವ ಮೋದಿ ವಿರುದ್ಧ ಕತ್ತಿ ಮಸೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

