ಅಖಂಡ ಆಂಧ್ರ ವಿಭಜನೆ ನೋವು ತಂದಿದೆ: ಕಿರಣ್‌ಕುಮಾರ್ ರೆಡ್ಡಿ

ಹೈದರಾಬಾದ್: ಅಖಂಡ ಆಂಧ್ರಪ್ರದೇಶ ವಿಭಜನೆ ತಮಗೂ ನೋವು ತಂದಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ.
ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಘೋಷಣೆ ಹಿನ್ನೆಲೆಯಲ್ಲಿ ಇಂದು ಸಂಪುಟ ಸಚಿವರೊಂದಿಗೆ ಸಭೆ ನಡೆಸಿದ ಆಂಧ್ರ ಸಿಎಂ, ಅಖಂಡ ಆಂಧ್ರ ವಿಭಜನೆ ನಿರ್ಧಾರ ನನಗೂ ನೋವು ತಂದಿದೆ. ಆದರೆ ಪರಿಸ್ಥಿತಿಯ ಒತ್ತಡದಿಂದಾಗಿ ಕೇಂದ್ರ ಸರ್ಕಾರ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗೆ ಮುಂದಾಗಿದೆ ಎಂದು ತಮ್ಮ ಅಸಹಾಯಕತೆ ತೋಡಿಕೊಂಡರು.
ತೆಲಂಗಾಣ ರಾಜ್ಯ ಬೇಕೇ ಬೇಕು ಎಂಬ ಐದು ದಶಕಗಳ ಹೋರಾಟಕ್ಕೆ ಮಣಿದು, ನಿನ್ನೆ ದೇಶದ 29ನೇ ರಾಜ್ಯವಾಗಿ ತೆಲಂಗಾಣ ರಚನೆಗೆ ಯುಪಿಎ ಸಮನ್ವಯ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಹಸಿರು ನಿಶಾನೆ ತೋರಿವೆ. ಆದರೆ ಇಂದು ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಆಂಧ್ರದಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ಕೆಲವು ಕಡೆ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಆಂಧ್ರಪ್ರದೇಶಾದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಕ್ಕೂ ತಟ್ಟಿದ ತೆಲಂಗಾಣ ಬಿಸಿ
ತೆಲಂಗಾಣ ವಿರೋಧಿ ಪ್ರತಿಭಟನೆಯ ಬಿಸಿ ಕರ್ನಾಟಕಕ್ಕೂ ತಟ್ಟಿದ್ದು, ರಾಜ್ಯದಿಂದ ಆಂಧ್ರಪ್ರದೇಶದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ನಿನ್ನೆ ರಾತ್ರಿ ಆಂಧ್ರಕ್ಕೆ ತೆರಳಿರುವ ಬಸ್‌ಗಳು ಸಹ ಅಲ್ಲೇ ಉಳಿದುಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


