ಐಎಎಸ್ ಅಧಿಕಾರಿ ಅಮಾನತು ಪ್ರಶ್ನಿಸಿ ನ್ಯಾಯಾಲಯಕ್ಕೆ ಪಿಐಎಲ್
ಲಖನೌ: ಉತ್ತರ ಪ್ರದೇಶದ ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್ ಅವರ ಅಮಾನತು ಪ್ರಶ್ನಿಸಿ ಬುಧವಾರ ಅಲಹಬಾದ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಸಾಮಾಜಿಕ ಕಾರ್ಯರ್ತ ನುತನ್ ಠಾಕುರ್ ಅವರು ಐಎಎಸ್ ಅಧಿಕಾರಿ ಅಮಾನತು ಪ್ರಶ್ನಿಸಿ ಇಂದು ಅಲಹಾಬಾದ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅಕ್ರಮ ಗಣಿಗಾರಿಕೆ ತಡೆದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್ ಅವರನ್ನು ಅಮಾನತುಗೊಳಿಸಲಾಗಿತ್ತು.
ಇದನ್ನು ವಿರೋಧಿಸಿ ಉತ್ತರ ಪ್ರದೇಶದ ಐಎಎಸ್ ಅಧಿಕಾರಿಗಳ ಸಂಘ ಪ್ರತಿಭಟನೆ ನಡೆಸಿತ್ತು.
ಇದರ ಬೆನ್ನಲ್ಲೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ಆಗಸ್ಟ್ 1ರಂದು ನಡೆಯಲಿದೆ. ಐಎಎಸ್ ಅಧಿಕಾರಿ ಅಮಾನತು ರದ್ದುಗೊಳಿಸಬೇಕು ಹಾಗೂ ರಾಜ್ಯ ಸರ್ಕಾರಗಳಿಂದ ಐಎಎಸ್ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

