ಈಗಿನ ಸುದ್ದಿ

ಐಎಎಸ್ ಅಧಿಕಾರಿ ಅಮಾನತು ಸಮರ್ಥಿಸಿಕೊಂಡ ಅಖಿಲೇಶ್

Published On :

ಲಖನೌ: ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್ ವಿರುದ್ಧ ಕೈಗೊಂಡಿರುವ ಕ್ರಮವನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ಅಕ್ರಮ ಗಣಿಗಾರಿಕೆ ತಡೆದ ಐಎಎಸ್ ಅಧಿಕಾರಿಯನ್ನು ಉತ್ತರ ಪ್ರದೇಶದ ಸರ್ಕಾರ ಅಮಾನತುಗೊಳಿಸಿತ್ತು. ಅಮಾನತು ಖಂಡಿಸಿ ಉತ್ತರ ಪ್ರದೇಶದ ಐಎಎಸ್ ಅಧಿಕಾರಿಗಳ ಸಂಘ ಪ್ರತಿಭಟನೆ ನಡೆಸಿ, ಅಮಾನತು ರದ್ದುಗೊಳಿಸುವಂತೆ ರಾಜ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಖಿಲೇಶ್, ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ಅವರು ಮೇಲಧಿಕಾರಿಗಳ ಅನುಮತಿ ಪಡೆಯದೇ ಹಾಗೂ ಮಾಹಿತಿ ನೀಡದೇ ಮಸೀದಿಯನ್ನು ಧ್ವಂಸ ಮಾಡಿ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಆದ್ದರಿಂದ ಅವರನ್ನು ಅಮಾನತುಗೊಳಿಸಲಾಗಿದೆ. ಯಾವದೇ ಅಧಿಕಾರಿಗಳಲ್ಲಿ ನೂನ್ಯತೆ ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಇದೇ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪರೋಕ್ಷವಾಗಿ ಐಎಎಸ್ ಅಧಿಕಾರಿಗಳಿಗೆ ಅಖಿಲೇಶ್ ಎಚ್ಚರಿಸಿದ್ದಾರೆ.

ಮರಳು ಮಾಫಿಯಾ ವಿರುದ್ಧ ಹೋರಾಟ ನಡೆಸಿದ ಮಹಿಳಾ ಐಎಎಸ್ ಅಧಿಕಾರಿ ದುರ್ಗಾಶಕ್ತಿ ನಾಗ್‌ಪಾಲ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಲು ಉತ್ತರಪ್ರದೇಶದ ಸರ್ಕಾರ ಚಿಂತನೆ ನಡೆಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.