ಈಗಿನ ಸುದ್ದಿ

ಆರ್‌ಟಿಐ ವ್ಯಾಪ್ತಿಗೆ ರಾಜಕೀಯ ಪಕ್ಷಗಳು: ಆಯೋಗ

ಆರ್‌ಟಿಐ ವ್ಯಾಪ್ತಿಗೆ ರಾಜಕೀಯ ಪಕ್ಷಗಳು: ಆಯೋಗ
Published On :

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ರಾಜಕೀಯ ಪಕ್ಷಗಳನ್ನು ಸೇರಿಸಲಾಗಿದೆ ಎಂದು ಸೋಮವಾರ ಕೇಂದ್ರ ಮಾಹಿತಿ ಆಯೋಗ(ಸಿಐಸಿ) ಹೇಳಿದೆ.

ಕೇಂದ್ರೀಯ ಮಾಹಿತಿ ಆಯೋಗ ಇಂದು ಪ್ರಮುಖ ನಿರ್ಣಯವೊಂದನ್ನು ಕೈಗೊಂಡಿದ್ದು, ಈ ಮೂಲಕ ಇನ್ನು ಮುಂದೆ ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಸೇರಿಸಿದೆ. ಅಲ್ಲದೆ ಮಾಹಿತಿ ಹಕ್ಕು ಕಾಯ್ದೆಯ ಅನ್ವಯ ಸಾರ್ವಜನಿಕರಿಗೆ ಪಾತ್ರವಾಗುವ ಎಲ್ಲ ಹಕ್ಕುಗಳನ್ನು ನಾಗರೀಕರು ಈ ಹೊಸ ತಿದ್ದುಪಡಿಯಲ್ಲಿಯೂ ಚಲಾಯಿಸಬಹುದಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಅದರಂತೆ ಇನ್ನು ಮುಂದೆ ದೇಶದ ಎಲ್ಲ ರಾಜಕೀಯ ಪಕ್ಷಗಳ ಆರ್ಥಿಕ ವ್ಯವಹಾರ, ಖರ್ಚು, ವೆಚ್ಚ ಸೇರಿದಂತೆ ಅಭ್ಯರ್ಥಿಗಳ ಆಯ್ಕೆಯನ್ನು ನಾಗರೀಕರು ಆರ್‌ಟಿಐ ಮೂಲಕ ಪ್ರಶ್ನಿಸಬಹುದಾಗಿದೆ.

ಕೇಂದ್ರೀಯ ಮಾಹಿತಿ ಆಯೋಗ ಇಂತಹ ಪ್ರಮುಖ ನಿರ್ಧಾರ ಕೈಗೊಳ್ಳಲು ಪ್ರಮುಖ ಕಾರಣವೆಂದರೆ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಮತ್ತು ಆರ್‌ಟಿಐ ಕಾರ್ಯಕರ್ತ ಸುಭಾಷ್ ಅಗರ್ವಾಲ್. ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಸೇರಿಸಬೇಕು ಎಂಬ ಅವರ ಸತತ ಹೋರಾಟಕ್ಕೆ ಮಣಿದಿರುವ ಆಯೋಗ ಇಂದು ಈ ಹೊಸ ತಿದ್ದುಪಡಿಯನ್ನು ಮಾಡಿದೆ. ಅಲ್ಲದೆ ಈ ಹಿಂದೆ ಈ ಇಬ್ಬರು ವಕೀಲರು ಇದೇ ಕಾರಣಕ್ಕಾಗಿ ನ್ಯಾಯಾಲಯದಲ್ಲಿ ಮನವಿಯನ್ನು ಕೂಡ ಸಲ್ಲಿಸಿದ್ದರು.

ಒಟ್ಟಾರೆ ಆರ್‌ಟಿಐ ಕಾರ್ಯಕರ್ತರ ಬಹುದಿನಗಳ ಆಶಯ ಇದೀಗ ಕೈಗೂಡಿದೆ. ಇನ್ನು ಮುಂದೆ ಚುನಾವಣೆಯಲ್ಲಿ ತಮಗಿಷ್ಟ ಬಂದವರಿಗೆ ಟಿಕೆಟ್ ನೀಡುವ ರಾಜಕೀಯ ಪಕ್ಷಗಳ ದೊಂಬರಾಟವನ್ನು ದೇಶದ ಪ್ರತಿಯೊಬ್ಬ ನಾಗರಿಕನೂ ಪ್ರಶ್ನಿಸಬಹುದಾಗಿದೆ. ಅಲ್ಲದೆ ಪ್ರಜೆಗಳು ಕೇಳುವ ಈ ಪ್ರಶ್ನೆಗಳಿಗೆ ಆಯಾ ಪಕ್ಷಗಳ ಸಿಬ್ಬಂದಿ ಉತ್ತರಿಸಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.