ಈಗಿನ ಸುದ್ದಿ

ವಿಂದೂ, ಮೇಯಪ್ಪನ್ ನ್ಯಾಯಾಂಗ ಬಂಧನಕ್ಕೆ

Published On :

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಮತ್ತು ಗುರುನಾಥ್ ಮೇಯಪ್ಪನ್ ಅವರಿಗೆ ಸ್ಥಳೀಯ ನ್ಯಾಯಾಲಯ ಜೂನ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸ್ಪಾಟ್ ಫಿಕ್ಸಿಂಗ್ ಸಂಬಂಧ ಮುಂಬೈ ಅಪರಾಧ ದಳ ತನಿಖೆ ನಡೆಸುತ್ತಿದ್ದು, ವಿಂದೂ ಮತ್ತು ಮೇಯಪ್ಪನ್ ಅವರನ್ನು ವಶಕ್ಕೆ ತೆಗೆದುಕೊಂಡಿತು. ಸೋಮವಾರ ಅವರ ಪೊಲೀಸ್ ಕಸ್ಟಡಿ ಕೊನೆಗೊಂಡ ಹಿನ್ನಲೆಯಲ್ಲಿ ವಿಂದೂ ಮತ್ತು ಮೇಯಪ್ಪನ್ ಅವರ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸುವಂತೆ ಮುಂಬೈ ಅಪರಾಧ ದಳ ನ್ಯಾಯಾಲಯದಲ್ಲಿ ಮನವಿ ಮಾಡಿತ್ತು.

ಆದರೆ ಅರ್ಜಿಯನ್ನು ತಿರಸ್ಕರಿಸಿರುವ ಸ್ಥಳಿಯ ನ್ಯಾಯಾಲಯ ವಿಂದೂ, ಮೇಯಪ್ಪನ್, ಹಾಗೂ ಬುಕ್ಕಿಗಳಾದ ಅಲ್ಪೇಶ್ ಕುಮಾರ್ ಪಟೇಲ್, ಪ್ರೇಮ್ ತನೇಜ ಅವರಿಗೆ ಜೂನ್ 14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಗುರುನಾಥ್ ಅವರದ್ದೂ ಕೈವಾಡವಿದೆ ಎಂದು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಬಂಧಿತನಾಗಿರುವ ಬಾಲಿವುಡ್ ನಟ ವಿಂದೂ ದಾರಾಸಿಂಗ್ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.