'ಆಹಾರ ಮಸೂದೆ'ಗೆ ವಿಶೇಷ ಅಧಿವೇಶನ ಕರೆಯಿರಿ: ಬಿಜೆಪಿ

ಹೈದರಾಬಾದ್: ಆಹಾರ ಮಸೂದೆ ಅಂಗೀಕಾರಕ್ಕೆ ಬಿಜೆಪಿ ಸಹಕರಿಸುತ್ತಿಲ್ಲ ಎಂಬ ಯುಪಿಎ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ನಮ್ಮ ಪಕ್ಷ ಆಹಾರ ಮಸೂದೆ ಪರವಾಗಿದ್ದು, ಕೆಲವು ತಿದ್ದುಪಡಿಗಳೊಂದಿಗೆ ಮಸೂದೆ ಅಂಗೀಕರಿಸಲು ಬಿಜೆಪಿ ಸಿದ್ಧವಿದೆ ಎಂದು ಸೋಮವಾರ ಹೇಳಿದ್ದಾರೆ.
ಇಂದು ಹೈದರಬಾದ್ನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಆಹಾರ ಮಸೂದೆ ಮತ್ತು ಭೂ ಸ್ವಾದೀನ ಮಸೂದೇ ಬಗ್ಗೆ ಚರ್ಚಿಸಲು ನಾವು ಸಿದ್ಧ. ಆದರೆ ಕೆಲವು ತಿದ್ದುಪಡಿಗಳೊಂದಿಗೆ ಈ ಎರಡೂ ಮಸೂದೆಗಳನ್ನು ಅಂಗೀಕರಿಸಲು ನಾವು ಬಯಸುತ್ತೇವೆ. ಈ ಬಗ್ಗೆ ಚರ್ಚಿಸಲು ಸರ್ಕಾರ ವಿಶೇಷ ಮುಂಗಾರು ಅಧಿವೇಶನ ಕರೆಯಲಿ ಎಂದಿದ್ದಾರೆ.
ಬಿಜೆಪಿ ಕೇಳಿದಾಗ ಕಾನೂನು ಮತ್ತು ರೇಲ್ವೆ ಸಚಿವರ(ಅಶ್ವಿನಿ ಕುಮಾರ್ ಮತ್ತು ಪವನ್ ಕುಮಾರ್ ಬನ್ಸಲ್) ರಾಜಿನಾಮೆ ಪಡೆದುಕೊಂಡಿದ್ದರೇ, ಈ ಎರಡೂ ಮಸೂದೆಗಳನ್ನು ಕಳೆದ ಸಂಸತ್ ಅಧಿವೇಶನದಲ್ಲಿ ಅಂಗೀಕರಿಸಬಹುದಾಗಿತ್ತು. ಆದರೆ ಯುಪಿಎ ಸರ್ಕಾರ ಕಳಂಕಿತ ಸಚಿವರ ರಾಜಿನಾಮೆ ಪಡೆಯಲು ಅನಗತ್ಯ ವಿಳಂಬ ಮಾಡಿತು ಎಂದು ಸಿಂಗ್ ಆರೋಪಿಸಿದರು.
ಇನ್ನು ಸುಗಮ ಕಲಾಪಕ್ಕೆ ಪ್ರತಿಪಕ್ಷ ಅವಕಾಶ ನೀಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ ಸಿಂಗ್, ಸುಗಮ ಕಲಾಪ ನಡೆಯುವಂತೆ ನೋಡಿಕೊಳ್ಳುವುದು ಸರ್ಕಾರದ ಮೊದಲ ಜವಾಬ್ದಾರಿ ಎಂದರು.
ಇದೇ ವೇಳೆ ಪಕ್ಷದ ಪ್ರಧಾನಿ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಒಬ್ಬ ಜನಪ್ರಿಯ ನಾಯಕ, ಪ್ರಧಾನಿ ಅಭ್ಯರ್ಥಿಯ ಬಗ್ಗೆ ಪಕ್ಷದ ಸಂಸದೀಯ ಮಂಡಳಿ ನಿರ್ಧರಿಸಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


