ಈಗಿನ ಸುದ್ದಿ

ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆ

ಬಾಲಿವುಡ್ ನಟಿ ಜಿಯಾ  ಖಾನ್ ಆತ್ಮಹತ್ಯೆ
Published On :

ಮುಂಬೈ: ಮಾನಸಿಕ ಒತ್ತಡದಿಂದ ಬಳಲುತಿದ್ದ ಬಾಲಿವುಡ್ ನಟಿ ಜಿಯಾ ಖಾನ್ ಅವರು ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರ ಮಧ್ಯರಾತ್ರಿ ಮುಂಬೈನಲ್ಲಿರುವ ಜುಹು ನಿವಾಸದಲ್ಲಿ ಜಿಯಾ ಖಾನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಹಲವಾರು ತಿಂಗಳಿನಿಂದ ಜಿಯಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಒಬ್ಬರೇ ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆಕೆಯ ಮನೆಕಾವಲುಗಾರ, ನೆರೆಮನೆಯವರನ್ನು ಮತ್ತು ಸಂಬಂಧಿಕರನ್ನು ವಿಚಾರಣೆಗೊಳಪಡಿಸಿ ತನಿಖೆ ಕೈಗೊಳ್ಳಲಾಗುವುದು ಎಂದು ಮಂಗಳವಾರ ತಿಳಿಸಿದ್ದಾರೆ.

ಕಳೆದ ರಾತ್ರಿ 11 ರ ಸಮಯದಲ್ಲಿ ಜಿಹಾ ಅವರ ತಾಯಿ ಮತ್ತು ಸಹೋದರಿ ಮನೆಗೆ ಬಂದಾಗ ಜಿಯಾ ಅವರು ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಜಿಯಾ ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ ಹಾಗೂ ಘಟನೆ ಬಗ್ಗೆ ಪೂರ್ಣ ಮಾಹಿತಿ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ರಾಮ್‌ಗೋಪಾಲ್ ವರ್ಮಾ ಅವರ ನಿಶಬ್ಧ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದರ್ಪಣೆ ಮಾಡಿದ ಜಿಯಾ, ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚನ್ ಅವರ ಚಿತ್ರದಲ್ಲಿ ನಟಿಸಿದ್ದಾರೆ. ಅಮಿರಖಾನ್ ಅವರ ಗಜನಿ ಚಿತ್ರದಲ್ಲಿ ನಟಿಸಿರುವ ಜಿಯಾ ಅವರಿಗೆ ಫಿಲ್ಮಿಫೇರ್ ಪ್ರಶಸ್ತಿ ಲಭಿಸಿದೆ.

2010ರಲ್ಲಿ ಬಿಡುಗಡೆಯಾದ 'ಹೌಸ್‌ಫುಲ್‌' ಚಿತ್ರ ಅವರ ಕೊನೆಯ ಚಿತ್ರವಾಗಿದೆ. ಇದರಲ್ಲಿ ಸಹನಟಿಯಾಗಿದ್ದರು.

ಇಂಗ್ಲೆಂಡ್‌ನಲ್ಲಿ ಬೆಳೆದ ಜಿಯಾ ಹಿಂದಿ ಚಿತ್ರಗಳಲ್ಲಿ ನಟಿಸುವ ಆಸೆಯಿಂದ ಮುಂಬೈನಲ್ಲಿ ನೆಲೆಯೂರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.