ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ರಾಜಸ್ಥಾನ ರಾಯಲ್ಸ್ ಮಾಲಿಕ ರಾಜ್ ಕುಂದ್ರಾ ವಿಚಾರಣೆ

ಸ್ಪಾಟ್ ಫಿಕ್ಸಿಂಗ್: ರಾಜಸ್ಥಾನ ರಾಯಲ್ಸ್ ಮಾಲಿಕ ರಾಜ್ ಕುಂದ್ರಾ ವಿಚಾರಣೆ
Published On :

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಹಗರಣ ಸಂಬಂಧ ರಾಜಸ್ಥಾನ್ ರಾಯಲ್ಸ್ ಮಾಲಿಕ ರಾಜಕುಂದ್ರಾ ಅವರನ್ನು ದೆಹಲಿ ಪೊಲೀಸರು ಬುಧವಾರ ವಿಚಾರಣೆಗೊಳಪಡಿಸಿದ್ದಾರೆ.

ಸ್ಪಾಟ್ ಫಿಕ್ಸಿಂಗ್ ಸಂಬಂಧ ಬಂಧನಕ್ಕೊಳಗಾಗಿರುವ ರಾಜಸ್ಥಾನ ರಾಯಲ್ಸ್‌ನ ಆಟಗಾರರ ಮಾಹಿತಿ ಮತ್ತು ಐಪಿಎಲ್‌ನಲ್ಲಿ ಅವರ ಒಪ್ಪಂದದ ಅವಧಿ ಹಾಗೂ ಇತರೆ ತನಿಖೆಗೆ ಸಂಬಂಧ ಪಟ್ಟಂತೆ ಮಾಹಿತಿ ನೀಡುವಂತೆ ರಾಜ್‌ಕುಂದ್ರಾ ಅವರಿಗೆ ದೆಹಲಿ ಪೊಲೀಸರು ಕರೆ ನೀಡಿದ್ದರು.

ಇಂದು ಬೆಳಿಗ್ಗೆ ಕುಂದ್ರಾ ಅವರು ಲೋದಿ ರಸ್ತೆಯಲ್ಲಿರುವ ವಿಶೇಷ ದೆಹಲಿ ಪೊಲೀಸ್ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ದೆಹಲಿ ಪೊಲೀಸರು,  ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ಮೋಕಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭೂಗತ ಜಗತ್ತಿನ ಪಾತಕಿ ದಾವುದ್ ಭಾಗಿಯಾಗಿರುವುದು ಸ್ಪಷ್ಟವಾಗಿರುವುದರಿಂದ ಪ್ರಕರಣವನ್ನು ಬಲಪಡಿಸುವ ಉದ್ದೇಶದಿಂದ ದೆಹಲಿ ಪೊಲೀಸರು ಶ್ರೀಶಾಂತ್ ಮತ್ತು ಸ್ಪಾಟ್ ಫಿಕ್ಸಿಂಗ್‌ನಲ್ಲಿ ಬಂಧನಕ್ಕೀಡಾಗಿರುವ ಇತರೆ 25 ಆರೋಪಿಗಳ ವಿರುದ್ಧ ಮೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಈ ಕಾಯ್ದೆ ಪ್ರಕಾರ ತಪ್ಪೊಪ್ಪಿಗೆ ನೀಡುವ ಆರೋಪಿಗಳು ಅಥವಾ ಸಾಕ್ಷಿಗಳು ನ್ಯಾಯಾಲಯಕ್ಕೆ ಹಾಜರಾಗುವು ಮುನ್ನ ಉಪ ಪೊಲೀಸ್ ಆಯುಕ್ತ ಅಥವಾ ಅದೇ ಸ್ಥಾನದ ಅಧಿಕಾರಿಗಳ ಎದುರು ಹಾಜರಾಗಿ ವಿಚಾರಣೆ ಎದುರಿಸಬೇಕಿದೆ. ಇದರಿಂದ ಆರೋಪಿಗಳು ಮತ್ತು ಸಾಕ್ಷಿಗಳು ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಪ್ರಯತ್ನಕ್ಕೆ ಕಡಿವಾಣ ಬೀಳುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.