ಈಗಿನ ಸುದ್ದಿ

ಡಿಎಸ್ಪಿ ಹತ್ಯೆ: ರಾಜಾಭಯ್ಯಾಗೆ ಸುಳ್ಳು ಪತ್ತೆ ಪರೀಕ್ಷೆ

Published On :

ಲಖನೌ: ಉತ್ತರ ಪ್ರದೇಶ ಡಿವೈಎಸ್‌ಪಿ ಜಿಯಾ ಉಲ್ ಹಕ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ರಾಜಾಭಯ್ಯಾ ಅವರ ವಿರುದ್ದ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಸಿಬಿಐ ಅಧಿಕಾರಿಗಳು ಮುಂದಾಗಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶದ ಡಿವೈಎಸ್‌ಪಿ ಜಿಯಾ ಉಲ್ ಹಕ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಾಜಾಭಯ್ಯಾ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೊಳಪಡಿಸಲು ಸಿಬಿಐ ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕಾಗಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿರುವ ಅಧಿಕಾರಿಗಳು, ರಾಜಾಭಯ್ಯಾ ಅವರನ್ನು ಸುಳ್ಳುಪತ್ತೆ ಪರೀಕ್ಷೆಗೊಳಪಡಿಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜಾಭಯ್ಯಾ ಅವರನ್ನು ಈಗಾಗಲೇ ಪ್ರಾಥಮಿಕ ತನಿಖೆಗೊಳಪಡಿಸಿರುವ ಸಿಬಿಐ ಅಧಿಕಾರಿಗಳು, ಮತ್ತಷ್ಟು ಸಾಕ್ಷಿಗಳಿಗಾಗಿ ಅವರನ್ನು ಈ ಪರೀಕ್ಷೆಗೆ ಒಳಪಡಿಸಬೇಕು ಎಂದು ನ್ಯಾಯಾಲಯದ ಬಳಿ ಮನವಿ ಸಲ್ಲಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ರಾಜಾಭಯ್ಯಾ ಅವರನ್ನು 20 ಗಂಟೆಗಳ ಕಾಲವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳಿಗೆ ಯಾವುದೇ ಪ್ರಮುಖ ಸಾಕ್ಷಿಗಳು ಲಭ್ಯವಾಗಿರಲಿಲ್ಲ.

ನಾಳೆ ನ್ಯಾಯಾಲಯ ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ಒಂದು ವೇಳೆ ನ್ಯಾಯಾಲಯ ರಾಜಾಭಯ್ಯಾ ಅವರ ಸುಳ್ಳುಪತ್ತೆ ಪರೀಕ್ಷೆ ನಡೆಸಲು ಅನುಮತಿ ನೀಡಿದರೆ ಬಹುಶಃ ಪ್ರಕರಣಕ್ಕೆ ಪ್ರಮುಖ ತಿರುವು ದೊರೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.