ಅವಹೇಳನಕಾರಿ ವರದಿ: ರವಿ ಬೆಳಗೆರೆ ಅರ್ಜಿ ವಜಾ
ಚಿತ್ರದುರ್ಗ: ಅವಹೇಳನಕಾರಿ ವರದಿ ಪ್ರಕಟ ಪ್ರಕರಣ ಸಂಬಂಧ ಪತ್ರಕರ್ತ ರವಿಬೆಳಗೆರೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಚಿತ್ರದುರ್ಗ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಚಿತ್ರದುರ್ಗದ ಮಾಜಿ ಮೇಯರ್ ಸುನಿತಾ ಮಲ್ಲಿಕಾರ್ಜುನ ಅವರ ವಿರುದ್ಧ ಅವಹೇಳನಕಾರಿ ವರದಿ ಪ್ರಕಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನ್ಯಾಯಾಲಯ ರವಿಬೆಳಗರೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿದ್ದ ರವಿಬೆಳಗರೆ ಅವರು ತಮ್ಮ ವಿರುದ್ಧ ವಾರಂಟ್ ಜಾರಿಮಾಡದಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆ ನಡೆಸಿ ರವಿಬೆಳಗೆರೆ ಅವರ ಅರ್ಜಿಯನ್ನು ವಜಾಗೊಳಿಸಿದೆ.
ಆ ಮೂಲಕ ಪತ್ರಕರ್ತ ರವಿಬೆಳಗೆರೆ ಅವರನ್ನು ಚಿತ್ರದುರ್ಗ ಪೊಲೀಸರು ಯಾವುದೇ ಸಂದರ್ಭದಲ್ಲಿ ವಿಚಾರಣೆಗಾಗಿ ಬಂಧಿಸುವ ಸಾಧ್ಯತೆ ಇದೆ. ಚಿತ್ರದುರ್ಗದ ಮಾಜಿ ಮೇಯರ್ ಮತ್ತು ಜೆಡಿಎಸ್ ನಾಯಕಿಯಾಗಿರುವ ಸುನಿತಾ ಮಲ್ಲಿಕಾರ್ಜುನ ಅವರ ವಿರುದ್ಧ ಪತ್ರಕರ್ತ ರವಿಬೆಳಗೆರೆ ಅವರು ತಮ್ಮ 'ಹಾಯ್ ಬೆಂಗಳೂರು' ಪತ್ರಿಕೆಯಲ್ಲಿ ಅವಹಳೇನಕಾರಿ ಲೇಖನ ಪ್ರಕಟಿಸಿದ್ದರು. ಇದನ್ನು ಪ್ರಶ್ನಿಸಿದ್ದ ಸುನಿತಾ ಮಲ್ಲಿಕಾರ್ಜುನ ಅವರು ಚಿತ್ರದುರ್ಗದ ಸೆಷನ್ಸ್ ನ್ಯಾಯಾಲದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

