ಈಗಿನ ಸುದ್ದಿ

ಚಂದ್ರಚೂಡರೊಂದಿಗೆ ಶೃತಿ ಎರಡನೇ ಮದುವೆ

ಚಂದ್ರಚೂಡರೊಂದಿಗೆ ಶೃತಿ ಎರಡನೇ ಮದುವೆ
Published On :

ಬೆಂಗಳೂರು: ನಟಿ ಹಾಗೂ ಕೆಜೆಪಿ ನಾಯಕಿ ಶೃತಿ ಅವರು ಗುರುವಾರ ಬೆಳಗ್ಗೆ ಚಂದ್ರಶೇಖರ್ ಚಕ್ರವರ್ತಿ ಅಲಿಯಾಸ್ ಚಂದ್ರಚೂಡ ಅವರೊಂದಿಗೆ ಎರಡನೇ ಮದುವೆಯಾಗಿದ್ದಾರೆ.

ಮೊದಲನೇ ಪತಿ ನಿರ್ದೇಶಕ ಎಸ್.ಮಹೇಂದರ್ ಅವರಿಂದ ವಿಚ್ಛೇದನ ಪಡೆದಿದ್ದ ಶೃತಿ, ಇಂದು ಬೆಳಗ್ಗೆ 9.30ರ ಸುಮಾರಿಗೆ ಎರಡನೇ ಬಾರಿ ಹಸೆಮಣೆ ಏರಿದರು. ಉಡುಪಿ ಜೆಲ್ಲೆಯ ಕೊಲ್ಲೂರಿನ ಮುಕಾಂಬಿಕಾ ದೇವಸ್ಥಾನದ ಅರ್ಚಕರ ಮನೆಯಲ್ಲಿ ನಡೆದ ಸರಳ ವಿವಾಹದಲ್ಲಿ ಶೃತಿ ನೂತನ ದಾಂಪತ್ಯಕ್ಕೆ ಕಾಲಿಟ್ಟರು. ಈ ಸಮಾರಂಭದಲ್ಲಿ ಕುಟುಂಬ ಸದಸ್ಯರು ಹಾಗೂ ಕೆಲವೇ ಕೆಲವು ಆಪ್ತರು ಮಾತ್ರ ಭಾಗವಹಿಸಿದ್ದರು ಎನ್ನಲಾಗಿದೆ.

ಮಹೇಂದ್ರ ಅವರೊಂದಿಗಿನ ದಾಂಪತ್ಯ ಮುರಿದು ಬಿದ್ದ ನಂತರ ಶೃತಿ ಅವರು ತಮ್ಮ ಬಾಲ್ಯದ ಗೆಳೆಯ ಹಾಗೂ ಸಿನಿಮಾ ಪತ್ರಕರ್ತರಾಗಿರುವ ಚಂದ್ರಚೂಡ ಅವರೊಂದಿಗೆ ಅನ್ಯೋನ್ಯವಾಗಿದ್ದರು. ಇದೀಗ ಮದುವೆಯಾಗುವ ಮೂಲಕ ಮತ್ತಷ್ಟು ಹತ್ತಿರವಾಗಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ನಟಿ ಶೃತಿ, ಹೌದು ನಾನು ಚಂದ್ರಚೂಡ ಅವರೊಂದಿಗೆ ಎರಡನೇ ಮದವೆಯಾಗಿದ್ದು ನಿಜ. ಇಂದು ನನ್ನ ಮಗಳ ಹುಟ್ಟು ಹಬ್ಬ. ಅವಳ ಹುಟ್ಟು ಹಬ್ಬದ ದಿನದಂದೇ ಮದುವೆಯಾಗಿದ್ದು, ನನಗೆ ಖುಷಿ ಕೊಟ್ಟಿದೆ ಎಂದು ಹೇಳಿದ್ದಾರೆ.

ಇನ್ನು ಶೃತಿಯಿಂದ ವಿಚ್ಛೇದನ ಪಡೆದ ಬಳಿಕ ಮಹೇಂದರ್ ಅವರು ಸಹ ತಮ್ಮ ಸಂಬಂಧಿ ಯಶೋಧಾ ಎಂಬುವವರನ್ನು ಮದುವೆಯಾಗಿ, ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.