ಸ್ಪಾಟ್ ಫಿಕ್ಸಿಂಗ್: ಇಂದು ಶ್ರೀಶಾಂತ್ ಜಾಮೀನು ಅರ್ಜಿ ವಿಚಾರಣೆ
ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕ್ರಿಕೆಟಿಗ ಶ್ರೀಶಾಂತ್ ಮತ್ತು ಬುಕ್ಕಿ ಜಿಜು ಜನಾರ್ಧನ್ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರ ಮೋಕಾ ಕೋರ್ಟ್‌ನಲ್ಲಿ ನಡೆಯಲಿದೆ.
ನಾನು ನಿರಪರಾಧಿ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿರಿರುವ ಶ್ರೀಶಾಂತ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಸ್ಪಾಟ್ ಫಿಕ್ಸಿಂಗ್ ಹಗರಣ ಸಂಬಂಧ ಶ್ರೀಶಾಂತ್, ಅಜಿತ್ ಚಾಂಡಿಯಾಲ ಮತ್ತು ಅಂಕಿತ್ ಚವ್ಹಾಣ್ ವಿರುದ್ಧ ಮೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭೂಗತ ಜಗತ್ತಿನ ಪಾತಕಿ ದಾವುದ್ ಭಾಗಿಯಾಗಿರುವುದು ಸ್ಪಷ್ಟವಾಗಿರುವುದರಿಂದ ಪ್ರಕರಣವನ್ನು ಬಲಪಡಿಸುವ ಉದ್ದೇಶದಿಂದ ದೆಹಲಿ ಪೊಲೀಸರು ಶ್ರೀಶಾಂತ್ ಮತ್ತು ಸ್ಪಾಟ್ ಫಿಕ್ಸಿಂಗ್‌ನಲ್ಲಿ ಬಂಧನಕ್ಕೀಡಾಗಿರುವ ಇತರೆ 25 ಆರೋಪಿಗಳ ವಿರುದ್ಧ ಮೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಈ ಕಾಯ್ದೆ ಪ್ರಕಾರ ತಪ್ಪೊಪ್ಪಿಗೆ ನೀಡುವ ಆರೋಪಿಗಳು ಅಥವಾ ಸಾಕ್ಷಿಗಳು ನ್ಯಾಯಾಲಯಕ್ಕೆ ಹಾಜರಾಗುವು ಮುನ್ನ ಉಪ ಪೊಲೀಸ್ ಆಯುಕ್ತ ಅಥವಾ ಅದೇ ಸ್ಥಾನದ ಅಧಿಕಾರಿಗಳ ಎದುರು ಹಾಜರಾಗಿ ವಿಚಾರಣೆ ಎದುರಿಸಬೇಕಿದೆ. ಇದರಿಂದ ಆರೋಪಿಗಳು ಮತ್ತು ಸಾಕ್ಷಿಗಳು ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಪ್ರಯತ್ನಕ್ಕೆ ಕಡಿವಾಣ ಬೀಳುತ್ತದೆ.
ಇತ್ತೀಚೆಗಷ್ಟೆ ದೆಹಲಿ ನ್ಯಾಯಾಲಯ ಶ್ರೀಶಾಂತ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ, ಜೂನ್ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

