ಈಗಿನ ಸುದ್ದಿ

ಅಕ್ರಮ ಆಸ್ತಿಗಳಿಕೆ: ನ್ಯಾಯಾಲಯಕ್ಕೆ ಜಗನ್ ಹಾಜರು

ಅಕ್ರಮ ಆಸ್ತಿಗಳಿಕೆ: ನ್ಯಾಯಾಲಯಕ್ಕೆ ಜಗನ್ ಹಾಜರು
Published On :

ಹೈದರಾಬಾದ್: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರನ್ನು ಶುಕ್ರವಾರ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ.

ಜಗನ್ ಸೇರಿದಂತೆ ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ಜಗನ್ ಅವರ ವ್ಯವಹಾರಿಕ ಸಲಹೆಗಾರರಾದ ವಿಜಯ್ ಸಾಯಿ ರೆಡ್ಡಿ, ಆಂಧ್ರದ ಇಬ್ಬರು ಮಾಜಿ ಸಚಿವರಾಗಿರುವ ಸಬಿತಾ ಇಂದ್ರಾ ರೆಡ್ಡಿ ಮತ್ತು ಧರ್ಮನ ಪ್ರಸಾದ್ ರಾವ್ ಅವರನ್ನು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಕ್ರಮ ಆಸ್ಥಿಗಳಿಕೆ ಪ್ರಕರಣ ಸಂಬಂಧ ಸತತ ಒಂದು ವರ್ಷದಿಂದ ಬಂಧನದಲ್ಲಿರುವ ವೈಎಸ್ ಜಗನ್ ಅವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಅವರಿಗೆ ಜಾಮೀನು ನೀಡುವ ಕುರಿತು ನ್ಯಾಯಾಧೀಶರು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಆದರೆ ಸಿಬಿಐ ಪರ ವಕೀಲರು ಸಾಕ್ಷಿ ನಾಶವನ್ನು ಮುಂದಿಟ್ಟುಕೊಂಡು ಜಗನ್ ಮತ್ತು ಇತರೆ ಇಬ್ಬರು ಮಾಜಿ ಸಚಿವರ ಭವಿಷ್ಯವೂ ಇಂದೇ ನಿರ್ಧಾರವಾಗಲಿದೆ. ಏಪ್ರಿಲ್ 8ರಂದು ಜಗನ್, ಈ ಇಬ್ಬರು ಮಾಜಿ ಸಚಿವರುಗಳು ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಸಿಬಿಐ ಅಧಿಕಾರಿಗಳು 8ನೇ ಚಾರ್ಜ್ ಶೀಟ್ ದಾಖಲಿಸಿದ್ದರು. ಈ ಎಲ್ಲ ಆರೋಪಿಗಳು ನೇರವಾಗಿ ಮತ್ತು ಪರೋಕ್ಷವಾಗಿ ದಾಲ್ಮಿಯಾ ಸಿಮೆಂಟ್ಸ್ ಸಂಸ್ಥೆಯಲ್ಲಿ ಪಾಲುದಾರಿಕೆ ಹೊಂದಿರುವ ಅಂಶಗಳನ್ನು ಸಿಬಿಐ ಅಧಿಕಾರಿಗಳು ಬಹಿರಂಗಗೊಳಿಸಿದ್ದರು. ಇದೇ ಅಂಶಗಳ ಕುರಿತು ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

ಈ ಹಿಂದೆ ಇದೇ ಪ್ರಕರಣಕ್ಕೆ ಕುರಿತಂತೆ ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಮತ್ತು ಧರ್ಮನ ಪ್ರಸಾದ್ ರಾವ್ ಅವರು ನ್ಯಾಯಾಲಯಕ್ಕೆ ಖುದ್ದು ಭೇಟಿ ನೀಡಿ ವಿಚಾರಣೆ ಎದುರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.