ಈಗಿನ ಸುದ್ದಿ

ನಾಳೆಯೂ ಗೋವಾ ಕಾರ್ಯಕಾರಣಿಗೆ ಆಡ್ವಾಣಿ ಬರಲ್ಲ: ಬಿಜೆಪಿ

ನಾಳೆಯೂ ಗೋವಾ ಕಾರ್ಯಕಾರಣಿಗೆ ಆಡ್ವಾಣಿ ಬರಲ್ಲ: ಬಿಜೆಪಿ
Published On :

ಪಣಜಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಗೋವಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಣಿಯ ಕಡೆಯ ಹಾಗೂ ಮೂರನೇ ದಿನವಾದ ಭಾನುವಾರವೂ ಭಾಗವಹಿಸುವುದಿಲ್ಲ ಎಂದು ಶನಿವಾರ ಪಕ್ಷ ಸ್ಪಷ್ಟಪಡಿಸಿದೆ.

ಪ್ರತಿಕಾಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಪ್ರಕಾಶ್ ಜಾವೇಡಕರ್ ಅವರು, ಆಡ್ವಾಣಿ ಅವರು ಇಂದು ಮತ್ತು ನಾಳಿನ ಕಾರ್ಯಾಕಾರಣಿ ಸಭೆಯಲ್ಲಿ ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ ಅನಾರೋಗ್ಯದ ಕಾರಣ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರಿಂದ ಅವರು ನಾಳೆಯೂ ಸಭೆಗೆ ಆಗಮಿಸುತ್ತಿಲ್ಲ ಎಂದು ಹೇಳಿದರು.

ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಆಡ್ವಾಣಿ ಅವರೊಂದಿಗೆ ಮಾತನಾಡಿದ್ದು, ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸುವ ಸಂಬಂಧ ಆಯಾಸಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಜಾವೇಡಕರ್ ತಿಳಿಸಿದರು.

ಇದೇ ವೇಳೆ, ಮುಂದಿನ ಕಾರ್ಯಕಾರಣಿಯಲ್ಲಿ ಆಡ್ವಾಣಿಯವರು ಭಾಗವಹಿಸಲಿದ್ದಾರೆ ಎಂದು ಜಾವೇಡಕರ್ ಹೇಳಿದರು.

ಅನಾರೋಗ್ಯದ ಕಾರಣದಿಂದ ನಿನ್ನೆ ನಡೆದ ಬಿಜೆಪಿ ಸಂಸದೀಯ ಮಂಡಳಿಯ ಸಭೆಗೂ ಗೈರು ಆಗಿದ್ದ ಆಡ್ವಾಣಿ ಅವರು, ಇಂದಿನಿಂದ ಆರಂಭವಾಗಿರುವ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ನಿನ್ನೆ ರಾಜನಾಥ್ ಸಿಂಗ್ ಹೇಳಿದ್ದರು.

ಇದೇ ವೇಳೆ,2014ರ ಲೋಕಸಭೆ ಚುನಾವಣೆಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಪಕ್ಷದ ನೇತೃತ್ವದ ವಹಿಸುವ ತೀರ್ಮಾನ ನಾಳೆ ಹೊರ ಬೀಳಲಿದೆಯೇ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾವೇಡಕರ್, ನೀವು ನಾಳೆಯವರೆಗೆ ಕಾಯಿರಿ, ಅದಕ್ಕೆ ಉತ್ತರ ಸಿಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.