ಈಗಿನ ಸುದ್ದಿ

ಬಿಜೆಪಿ ಸಭೆ ಸಕಾರಾತ್ಮಕ ಅಂತ್ಯ ಕಾಣಲಿದೆ: ರಾಜನಾಥ್ ಸಿಂಗ್

ಬಿಜೆಪಿ ಸಭೆ ಸಕಾರಾತ್ಮಕ ಅಂತ್ಯ ಕಾಣಲಿದೆ: ರಾಜನಾಥ್ ಸಿಂಗ್
Published On :

ಪಣಜಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಸಂಬಂಧ ಪಕ್ಷದಲ್ಲಿ ಉಂಟಾಗಿರುವ ಹಲವು ಗೊಂದಲಗಳ ನಡುವೆಯೇ ಗೋವಾದ ರಾಜಧಾನಿ ಪಣಜಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಸಕಾರಾತ್ಮ ಬೆಳವಣಿಗೆಗಳೊಂದಿಗೆ ಅಂತ್ಯಗೊಳ್ಳಲಿದೆ ಮತ್ತು ಸಭೆಗೆ ಆಗಮಿಸಿದ ಎಲ್ಲರೂ ಖುಷಿಯಿಂದಲೇ ಹಿಂದಿರುಗಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.

ಇಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಅವರು, ಸಭೆಗೆ ಆಗಮಿಸಿದ ಎಲ್ಲರೂ ಸಂತೋಷ ಹಾಗೂ ಹೊಸ ಹುರುಪಿನಿಂದ ಮತ್ತು ಉತ್ಸಾಹದಿಂದ ಹಿಂದಿರುಗಲಿದ್ದಾರೆ ಎಂದು ಹೇಳಿರುವುದಾಗಿ ಬಿಜೆಪಿ ವಕ್ತಾರ ಪ್ರಕಾಶ್ ಜಾವೇಡಕರ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಛತ್ತೀಸ್‌ಗಢದ ಕಾಂಗ್ರೆಸ್ ರ್ಯಾಲಿ ವೇಳೆ ನಡೆದ ನಕ್ಸಲ್ ದಾಳಿಯ ಬಗ್ಗೆ ವಿಷಾಧ ವ್ಯಕ್ತಪಡಿಸುವುದರೊಂದಿಗೆ ಮತ್ತು ಗುಜರಾತ್ ಉಪ ಚುನಾಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವ ಮೂಲಕ ಬಿಜೆಪಿ ಅಧ್ಯಕ್ಷರು ತಮ್ಮ ಭಾಷಣ ಆರಂಭಿಸಿದರು. ಅಲ್ಲದೆ ಈ ಉಪ ಚುನಾವಣೆಯ ಗೆಲುವು ಪಕ್ಷಕ್ಕೆ ಮತ್ತಷ್ಟು ಚೈತನ್ಯ ತುಂಬಲಿದೆ ಎಂದರು.

ಈ ವೇಳೆ ಭಯೋತ್ಪಾದನೆ ಮತ್ತು ನಕ್ಸಲ್ ದಾಳಿಯ ಬಗ್ಗೆ ಮಾತನಾಡಿದ ಸಿಂಗ್, ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳೇ ಇದಕ್ಕೆಲ್ಲ ಕಾರಣ ಎಂದು ಆರೋಪಿಸಿದರು. ಅಲ್ಲದೆ ಕಾಂಗ್ರೆಸ್ ಮತ್ತು ಎಡ ಪಕ್ಷಗಳು ಉಗ್ರವಾದಿಗಳನ್ನು ಮತ್ತು ಹಿಂಸಾತ್ಮಕ ಜನರನ್ನು ರಕ್ಷಿಸುತ್ತಿರುವುದೇ ಒಂದು ದೊಡ್ಡ ಸಮಸ್ಯೆಯಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.