ಈಗಿನ ಸುದ್ದಿ

ಮಂಡೇಲಾ ಮತ್ತೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಡೇಲಾ ಮತ್ತೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Published On :

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಳು ತಿಂಗಳಲ್ಲಿ ಮೂರನೇ ಬಾರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ನೋಬೆಲ್ ಪ್ರಶಸ್ತಿ ವಿಜೇತ, 94 ವರ್ಷದ ಮಂಡೇಲಾ ಅವರು ಕಳೆದ ಏಪ್ರಿಲ್ 16ರಂದು ಪ್ರಿಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದರು. ಆದರೆ ಇದೀಗ ಅವರ ಆರೋಗ್ಯ ಮತ್ತಷ್ಟು ಬಿಗುಡಾಯಿಸಿದ್ದು, ಇಂದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆ ಎದುರಿಸುತ್ತಿದ್ದ ಅವರನ್ನು ಇಂದು ಮಧ್ಯಾಹ್ನ 1.30ರ ಸುಮಾರಿಗೆ ಪ್ರಿಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾ ಅಧ್ಯಕ್ಷ ಜಾಕೋಬ್ ಜುಮಾ ಅವರ ವಕ್ತಾರ ಮ್ಯಾಕ್ ಮಹರಾಜ್ ಅವರು ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಮಂಡೇಲಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ. ಆದರೂ ಅರೋಗ್ಯ ಸ್ಥಿರವಾಗಿದೆ ಎಂದು ಮಹರಾಜ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.