ಎನ್ಸಿಟಿಸಿಯಲ್ಲಿ ಕಾನೂನು ತಿದ್ದುಪಡಿ ಇಲ್ಲ: ಶಿಂಧೆ

ನವದೆಹಲಿ: ರಾಷ್ಟ್ರೀಯ ಭಯೋತ್ಪಾದನೆ ನಿಗ್ರಹ ದಳ(ಎನ್ಸಿಟಿಸಿ)ಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ಕಾನೂನು ಉತ್ತಮವಾಗಿದ್ದು, ಇದರಲ್ಲಿ ಯಾವುದೇ ತಿದ್ದುಪಡಿ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಭಾನುವಾರ ಹೇಳಿದ್ದಾರೆ.
ಕೇಂದ್ರ ಸರ್ಕಾರ ರೂಪಿಸಿರುವ ಎನ್ಸಿಟಿಸಿಗೆ ವಿರೋಧ ವ್ಯಕ್ತಪಡಿಸಿದ್ದ ರಾಜ್ಯ ಸರ್ಕಾರಗಳು, ನೂತನ ಕಾನೂನು ತಿದ್ದುಪಡಿ ಮಾಡುವಂತೆ ಸಲಹೆ ನೀಡಿದ್ದವು.
ಎನ್ಸಿಟಿಸಿ ಮಸೂದೆಯ ಕುರಿತು ಸಂಸತ್ನಲ್ಲಿ ನಡೆದ ಚರ್ಚೆ ಸಂದರ್ಭದಲ್ಲಿ, ಮಸೂದೆಯಲ್ಲಿ ಹಲವಾರು ಬದಲಾವಣೆಗಳನ್ನು ತರುವ ಅವಶ್ಯಕತೆ ಇದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಿಂಧೆ ಅವರು, ಕೇಂದ್ರ ಸರ್ಕಾರ ಉತ್ತಮ ಕಾನೂನನ್ನೇ ರೂಪಿಸಿದ್ದು, ಇದರಲ್ಲಿ ಯಾವುದೇ ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎನ್ಸಿಟಿಸಿ ಮಸೂದೆಗೆ ಸಂಬಂಧಪಟ್ಟಂತೆ, ಸಂಸತ್ನಲ್ಲಿ ಮುಕ್ತ ಚರ್ಚೆ ಸಂದರ್ಭದಲ್ಲಿ ವಿರೋಧ ವ್ಯಕ್ತವಾಗಿದ್ದು ನಿಜ. ಆದರೆ ಪ್ರಸ್ತುತವಾಗಿ ಯಾವುದೇ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗುವುದಿಲ್ಲ ಎಂದು ಶಿಂಧೆ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಎನ್ಸಿಟಿಸಿಯಲ್ಲಿ ಹತ್ತು ವರ್ಷಗಳ ಹಿಂದಿನ ಕಾನೂನನ್ನೇ ಅಳವಡಿಸಲಾಗಿದೆ. ಹೀಗಾಗಿ ಎನ್ಸಿಟಿಸಿಯಲ್ಲಿ ನೂತನ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಗಳು ಕೇಂದ್ರದ ಮೇಲೆ ಒತ್ತಡ ಹೇರಿದ್ದವು.
ಎನ್ಸಿಟಿಸಿ ಮಸೂದೆ ಕುರಿತಂತೆ, ಸಂಸತ್ನಲ್ಲಿ ನಡೆದ ಚರ್ಚೆ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳಾದ ಮಮತ ಬ್ಯಾನರ್ಜಿ(ಪಶ್ಚಿಮ ಬಂಗಾಳ), ನರೇಂದ್ರ ಮೋದಿ (ಗುಜುರಾತ್), ರಮನ್ ಸಿಂಗ್ (ಛತ್ತೀಸ್ಗಡ), ಶಿವರಾಜ್ ಸಿಂಗ್ ಚೌಹಾಣ್ (ಮಧ್ಯಪ್ರದೇಶ), ಜಯಲಲಿತ (ತಮಿಳುನಾಡು) ಅವರು ವಿರೋಧ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


