ಈಗಿನ ಸುದ್ದಿ

ಬಾಲಕಿಯರ ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಕೆ: ಆರೋಪಿ ಬಂಧನ

Published On :

ಭರತಾಪುರ್: ಹಾಸ್ಟೆಲ್‌ನಲ್ಲಿ ಬಾಲಕಿಯರು ಉಪಯೋಗಿಸುತ್ತಿದ್ದ ಶೌಚಾಲಯದಲ್ಲಿ ಸಿಸಿಟಿವಿ ಅಳವಡಿಸಿದ್ದ ಹಾಸ್ಟೆಲ್ ಮಾಲಿಕರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮಹಿಳೆಯೊಬ್ಬಳು ಬಾಲಕಿಯರ ಹಾಸ್ಟೆಲ್ ನಡೆಸುತ್ತಿದ್ದು, ಆಕೆ ಬಾಲಕಿಯರು ಉಪಯೋಗಿಸುತ್ತಿದ್ದ 3 ಶೌಚಾಲಯದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಿದ್ದಳು ಎಂದು ತಿಳಿದು ಬಂದಿದೆ.

ಹಾಸ್ಟೆಲ್ ಮಾಲಿಕಳಾಗಿದ್ದ 30 ವರ್ಷದ ಶಾಲು ಸತಿಜಾಳನ್ನು ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷೆನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲು ಮತ್ತು ಆಕೆಯ ಪತಿ ಪಂಕಜ್ ಹಾಸ್ಟೆಲ್ ಮಾಲಿಕರಾಗಿದ್ದರು. ಹಾಸ್ಟೆಲ್‌ನಲ್ಲಿದ್ದ ಕ್ಯಾಮೆರಾಗಳನ್ನು ಹಾಗೂ ಪಂಕಜ್ ಬಳಸುತ್ತಿದ್ದ ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕಿಯರ ಹಾಸ್ಟೆಲ್‌ನ ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಓಂ ನಾಥ್ ಹಾಸ್ಟೆಲ್ ಮೇಲೆ ದಿಢೀರನೇ ದಾಳಿ ಮಾಡಿದ್ದಾರೆ. ದಾಳಿ ವೇಳೆ ಮೂರು ಶೌಚಾಲಯದ ಬಳಿ ಕ್ಯಾಮೆರಾ ಪತ್ತೆಯಾಗಿದೆ.

ಹಾಸ್ಟೆಲ್‌ನಲ್ಲಿ 14 ಬಾಲಕಿಯರಿದ್ದರು. ಜಿಲ್ಲಾಧಿಕಾರಿಗಳು ದಾಳಿ ಮಾಡಿದ ನಂತರ 6 ಜನ ಬಾಲಕಿಯರನ್ನು ಪೋಷಕರು ಕರೆದೊಯ್ದಿದ್ದು, ಇನ್ನು 8 ಜನ ಬಾಲಕಿಯರು ಬೇರೆ ವಿದ್ಯಾರ್ಥಿನಿಲಯಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.