ವಾಜಪೇಯಿ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಾಹಿತಿ ನೀಡಿ: ಸಿಐಸಿ ಆದೇಶ
ನವದೆಹಲಿ: ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜ್ಪೇಯಿ ಅವರ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಾಹಿತಿಯನ್ನು 15 ದಿನದೊಳಗಾಗಿ ನೀಡಬೇಕು ಎಂದು ಕೇಂದ್ರ ಮಾಹಿತಿ ಆಯೋಗ ಭಾನುವಾರ ಆರೋಗ್ಯ ಇಲಾಖೆಗೆ ಆದೇಶಿಸಿದೆ.
ಮಾಹಿತಿ ಹಕ್ಕು ಕಾಯ್ದೆ ಅಡಿ ವಾಜಪೇಯಿ ಅವರ ಚಿಕಿತ್ಸಾ ವೆಚ್ಚದ ಬಗ್ಗೆ ಮಾಹಿತಿ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.
ಇದರ ವಿಚಾರಣೆ ನಡೆಸಿದ ಕೇಂದ್ರ ಮಾಹಿತಿ ಆಯೋಗದ ಆಯುಕ್ತರಾದ ಸತ್ಯಾನಂದ ಮಿಶ್ರಾ ಅವರು, ಆರ್ಟಿಐ ಅಡಿ ಅರ್ಜಿದಾರರು ಕೇಳಿರುವಂತಹ ಮಾಹಿತಿ ನೀಡಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದೆ.
88 ವರ್ಷದ ವಾಜಪೇಯಿ ಅವರ ವೈದ್ಯಕೀಯ ಚಿಕಿತ್ಸಾ ವೆಚ್ಚ ಸೇರಿದಂತೆ ಇತರೆಗಳ ಬಗ್ಗೆ ಪೂರ್ಣ ಮಾಹಿತಿ ನೀಡುವಂತೆ ಕೋರಿದ್ದಾರೆ. ಮಾಹಿತಿ ನೀಡದ ಆರೋಗ್ಯ ಇಲಾಖೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಆಯೋಗ 15 ದಿನದೊಳಗಾಗಿ ಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದೆ.
ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಾಜಪೇಯಿ ಅವರು ಅನೇಕ ವೈದ್ಯಕೀಯ ಚಿಕಿತ್ಸೆಗೆ ಒಳಪಟ್ಟಿದ್ದರು. 1996ರಲ್ಲಿ 13 ದಿನಗಳ ಕಾಲ, 1008-99ರಲ್ಲಿ 13 ತಿಂಗಳ ಕಾಲ ಹಾಗೂ 1999 ರಿಂದ 2004 ರ ಒಳಗೆ ಅನೇಕ ಬಾರಿ ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾರೆ. ಇದಲ್ಲದೇ ಒಂದು ಬಾರಿ ಮೊಣಕಾಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಅರ್ಜಿದಾರರು ಮಾಹಿತಿ ನೀಡುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

