ಈಗಿನ ಸುದ್ದಿ

ರಾಜಿನಾಮೆ ಮರು ಪರಿಶೀಲಿಸಿ: ಆಡ್ವಾಣಿಗೆ ಬಿಜೆಪಿ

ರಾಜಿನಾಮೆ ಮರು ಪರಿಶೀಲಿಸಿ: ಆಡ್ವಾಣಿಗೆ ಬಿಜೆಪಿ
Published On :

ನವದೆಹಲಿ: ಬಿಜೆಪಿ ಸಂಸದೀಯ ಮಂಡಳಿ ಸಭೆ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಗೂ ರಾಜಿನಾಮೆ ನೀಡಿರುವ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರನ್ನು ಮನವೊಲಿಸಲು ಬಿಜೆಪಿ ಮುಂದಾಗಿದ್ದು, ರಾಜಿನಾಮೆ ಬಗ್ಗೆ ಮರು ಪರಿಶೀಲಿಸುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.

ಆಡ್ವಾಣಿ ರಾಜಿನಾಮೆ ನಿರ್ಧಾರ ಹೊರ ಬೀಳುತ್ತಿದ್ದಂತೆ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಅವರ ನಿವಾಸಕ್ಕೆ ದೌಡಾಯಿಸುತ್ತಿದ್ದು, ರಾಜಿನಾಮೆ ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಆಡ್ವಾಣಿ ರಾಜಿನಾಮೆಯನ್ನು ರಾಜನಾಥ್ ಸಿಂಗ್ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅವರು, ತಾವು ಆಡ್ವಾಣಿ ಅವರ ರಾಜಿನಾಮೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಆಡ್ವಾಣಿಯವರ ನಿವಾಸಕ್ಕೆ ಆಗಮಿಸಿದ ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು, 'ಇದು ನನಗೆ ಅಚ್ಚರಿ ಮೂಡಿಸಿದೆ. ಅವರು ಯಾವತ್ತು ರಾಜಿನಾಮೆ ವಿಷಯ ಪ್ರಸ್ತಾಪಿಸಿರಲಿಲ್ಲ. ಆದರೂ ಆಡ್ವಾಣಿ ಅವರು ತಮ್ಮ ರಾಜಿನಾಮೆಯನ್ನು ಹಿಂಪಡೆಯುತ್ತಾರೆ ಎಂಬ ವಿಶ್ವಾಸವಿದೆ' ಎಂದು ಹೇಳಿದ್ದಾರೆ.

ಇತರ ಬಿಜೆಪಿ ನಾಯಕರಾದ ವೆಂಕಯ್ಯ ನಾಯ್ಡು, ಅನಂತ್ ಕುಮಾರ್, ಬಲ್‌ಬಿರ್ ಪುಂಜ್ ಮತ್ತು ವಿ.ಕೆ.ಮಲ್ಹೋತ್ರ ಸೇರಿದಂತೆ ಹಲವು ನಾಯಕರು 85 ವರ್ಷದ ಬಿಜೆಪಿ ಭೀಷ್ಮನ ಮನೆ ಭೇಟಿ ನೀಡಿ, ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ರಾಜಿನಾಮೆ ಹಿಂಪಡೆಯುವಂತೆ ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ಆಡ್ವಾಣಿ ಅವರಿಗೆ ಮನವಿ ಮಾಡಿದ್ದಾರೆ ಎಂದು ಬಿಜೆಪಿ ಮಾಧ್ಯಮ ಉಸ್ತುವಾರಿ ಶ್ರೀಕಾಂತ್ ಶರ್ಮಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.