ಆಡ್ವಾಣಿ ರಾಜಿನಾಮೆಗೆ ಆರ್‌ಎಸ್‌ಎಸ್ ದೂಷಿಸಬೇಡಿ: ರಾಜನಾಥ್ ಸಿಂಗ್

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರ ರಾಜಿನಾಮೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ವೇ ಜವಾಬ್ದಾರಿ ಎಂಬ ವರದಿಗಳನ್ನು ತಳ್ಳಿಹಾಕಿರುವ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ಆಡ್ವಾಣಿ ರಾಜಿನಾಮೆಗೆ ಆರ್‌ಎಸ್‌ಎಸ್ ಅನ್ನು ದೂಷಿಸಬೇಡಿ ಎಂದು ಮಂಗಳವಾರ ಹೇಳಿದ್ದಾರೆ.
ಸಂಘ(ಆರ್‌ಎಸ್‌ಎಸ್) ನಮಗೆ ಏನನ್ನು ಹೇಳಿಲ್ಲ ಎಂದು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ. ಈ ಸಂಬಂಧ ನಾನು ಆರ್‌ಎಸ್‌ಎಸ್ ಮುಖಂಡರೊಂದಿಗೆ ಮಾತನಾಡಿದ್ದು, ಅವರು ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಈ ಎಲ್ಲ ಮಾಧ್ಯಮ ವರದಿಗಳು ಆಧಾರ ರಹಿತ ಎಂದು ಸಿಂಗ್ ವರದಿಗಾರರಿಗೆ ತಿಳಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ 2014ರ ಲೋಕಸಭೆ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದರಿಂದ ಆಡ್ವಾಣಿ ಅವರು ರಾಜಿನಾಮೆ ನೀಡಿರುವುದು ಆಘಾತ ತಂದಿದೆ. ಆದರೆ ಆಡ್ವಾಣಿ ಅವರ ಮನವೊಲಿಸಿ, ರಾಜಿನಾಮೆ ವಾಪಸ್ ತೆಗೆದುಕೊಳ್ಳುವಂತೆ ಮಾಡುವುದು ಆ ಪಕ್ಷದವರ ಕೈಯಲ್ಲೇ ಇದೆ. ಇದರಲ್ಲಿ ಆರ್‌ಎಸ್‌ಎಸ್ ಮಧ್ಯ ಪ್ರವೇಶ ಮಾಡುವುದಿಲ್ಲ. ಜತೆಗೆ ಯಾವುದೇ ಕಾರಣಕ್ಕೂ ಮೋದಿ ನೀಡಿರುವ ಸ್ಥಾನ ಕಿತ್ತುಕೊಳ್ಳಬಾರದು ಎಂದು ಸಂಘ ಸೂಚನೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.
ತಮ್ಮ ವಿರೋಧ ಲೆಕ್ಕಿಸದೇ ನರೇಂದ್ರ ಮೋದಿಗೆ ಪಕ್ಷದಲ್ಲಿ ಉನ್ನತ ಸ್ಥಾನ ನೀಡಿರುವುದರಿಂದ ರೊಚ್ಚಿಗೆದ್ದಿರುವ ಬಿಜೆಪಿ ಭೀಷ್ಮ ಆಡ್ವಾಣಿ ಅವರು ನಿನ್ನೆ ಪಕ್ಷದ ಮೂರು ಪ್ರಮುಖ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದರು. ಆದರೆ ಪಕ್ಷದ ಸಂಸದೀಯ ಮಂಡಳಿ ಆಡ್ವಾಣಿ ಅವರ ರಾಜಿನಾಮೆ ತಿರಸ್ಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


