ಮುಂಬೈನಲ್ಲಿ ಕಟ್ಟಡ ಕುಸಿತ: 7 ಸಾವು
ಮುಂಬೈ: ವಾಣಿಜ್ಯನಗರಿ ಮುಂಬೈನಲ್ಲಿ ವಾಣಿಜ್ಯ ಕಟ್ಟಡವೊಂದು ಕುಸಿದ್ದಿದ್ದು, ಘಟನೆಯಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಮುಂಬೈನ ಮಾಹಿಮ್ ದರ್ಗಾದ ಬಳಿ ಇರುವ ಅಲ್ತಾಫ್ ಎಂಬ ಹೆಸರಿನ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ರಾತ್ರಿಯಿಂದಲೇ ನಡೆಯುತ್ತಿರುವ ಕಟ್ಟಡ ತೆರವು ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಅವಶೇಷಗಳ ಅಡಿಯಲ್ಲಿ ಇಂದು 7 ಶವಗಳು ಪತ್ತೆಯಾಗಿವೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಅಬ್ದುಲ್ ಸತ್ತಾರ್ ಲಾಖಾ, ಮೈಸಾನಿ ಬಾಟ್ಲಿವಾಲಾ, ಹಲೀಮಾ ಶೇಖ್, ಮೊಬಿನ್ ಲಾಖಾ, ಸ್ಥಳೀಯ ವ್ಯಾಪಾರಿಗಳಾದ ಫರಾಜ್ ರಿಜ್ವಾನ್, ಆಸಿಫ್ ರಿಜ್ವಾನಾ ಮತ್ತು ಸಾಹಿರಾ ಗುಲಾಂ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಆರು ಮಂದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ಮುಂಬೈನ ಭಾಭಾ ಆಸ್ಪತ್ರೆ, ಕೆಇಎಂ ಆಸ್ಪತ್ರೆ ಮತ್ತು ಸಿಯನ್ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ದುರಂತಕ್ಕೆ ಕಾರಣ ತಿಳಿದಿಲ್ಲವಾದರೂ, ಸ್ಥಳೀಯರ ಪ್ರಕಾರ ಕಟ್ಟಡದ ಮಾಲೀಕ ಕಾರ್ ಶೋ ರೂಂ ತೆರೆಯಲು ಕಟ್ಟಡಲ್ಲಿ ಮಾಡಿದ್ದ ಮಾರ್ಪಟುಗಳೇ ಕಟ್ಟಡ ಕುಸಿಯಲು ಕಾರಣ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

