ಈಗಿನ ಸುದ್ದಿ

ಮುಂಬೈನಲ್ಲಿ ವರುಣನ ಆರ್ಭಟ: ರೈಲು ಸಂಚಾರ ಸ್ಥಗಿತ

Published On :

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹಳಿಗಳ ಮೇಲೆ ನೀರು ನಿಂತ ಪರಿಣಾಮ ಬಹುತೇಕ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಸತತ ಮೂರು ದಿನಗಳಿಂದ ಮುಂಬೈನಲ್ಲಿ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆದಿದ್ದು, ಮುಂಬೈ ಮಹಾನಗರಿಯ ಬಹುತೇಕ ಪ್ರದೇಶಗಳು ನೀರಿನಲ್ಲಿ ಮುಳುಗಡೆಯಾಗುವ ಅಪಾಯ ಎದುರಾಗಿದೆ. ಈಗಾಗಲೇ ಕೇಂದ್ರೀಯ ರೈಲ್ವೇ ಇಲಾಖೆ ಸುಮಾರು 150 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದು, ರಾತ್ರಿ ವೇಳೆಗೆ ಈ ಸಂಖ್ಯೆ ಮತ್ತಷ್ಚು ಹೆಚ್ಚಾಗುವ ಸಾಧ್ಯತೆ ಇದೆ.

ಮುಂಬೈನ ಪ್ರಮುಖ ಸಂಚಾರಿ ಮಾರ್ಗವಾಗಿರುವ ರೈಲುಗಳ ಸ್ಥಗಿತದಿಂದಾಗಿ ಮುಂಬೈ ಜನರು ಪರದಾಡುತ್ತಿದ್ದಾರೆ. ಅಲ್ಲದೆ ತಮ್ಮ ತಮ್ಮ ನೆಲೆಗಳನ್ನು ತಲುಪಲು ಅನ್ಯಮಾರ್ಗಗಳನ್ನು ಹುಡುಕುತ್ತಿದ್ದಾರೆ. ಮತ್ತಷ್ಟು ರೈಲುಗಳ ಸಂಚಾರ ಸ್ಥಗಿತಗೊಳ್ಳುವ ವಿಚಾರ ತಿಳಿಯುತ್ತಿದ್ದಂತೆಯೇ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಪರದಾಟ ಶುರುವಾಗಿದೆ. ಸಾವಿರಾರು ಪ್ರಯಾಣಿಕರು ನಿಲ್ದಾಣಗಳಲ್ಲಿ ರೈಲಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಈ ನಡುವೆ ಮುಂಬೈನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಲವು ಮನೆಗಳಿಗೆ ಹಾನಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಒಟ್ಟಾರೆ ವಾಣಿಜ್ಯ ನಗರಿ ಮುಂಬೈನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನತೆಗೆ ಆತಂಕವನ್ನುಂಟು ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.