ಈಗಿನ ಸುದ್ದಿ

ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು: ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್

ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು: ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್
Published On :

ಇಸ್ಲಾಮಾಬಾದ್: ಚುನಾವಣಾ ಪ್ರಚಾರದ ವೇಳೆ ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮಾಜಿ ಕ್ರಿಕೆಟಿಗ ಮತ್ತು ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಹೇಳಿದ್ದಾರೆ.

ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಪ್ರಚಾರದ ವೇಳೆ ವೇದಿಕೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಇಮ್ರಾನ್ ಖಾನ್ ಅವರು ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. 'ಚುನಾವಣಾ ಪ್ರಚಾರ ರ್ಯಾಲಿ ವೇಳೆ ನನ್ನನ್ನು ಹತ್ಯೆಗೈಯಲು ಸಂಚು ರೂಪಿಸಲಾಗಿತ್ತು ಎಂಬ ಅಂಶ ನನಗೆ ಮೊದಲೇ ತಿಳಿದಿತ್ತು. ನನ್ನ ಸ್ನೇಹಿತರು ಈ ಬಗ್ಗೆ ನನಗೆ ಮೊದಲೇ ಮಾಹಿತಿ ನೀಡಿದ್ದರು. ಆದರೆ ಈ ಸಂಚಿನ ಹಿಂದೆ ಯಾರಿದ್ದಾರೆ ಎಂದು ನನಗೆ ತಿಳಿಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಕಳೆದ ತಿಂಗಳ ಮೇ 7ರಂದು ಲಾಹೋರ್‌ನಲ್ಲಿ ನಡೆದಿದ್ದ ಪ್ರಚಾರ ರ್ಯಾಲಿ ವೇಳೆ ಇಮ್ರಾನ್ ಖಾನ್ ಅವರು ನಿಂತಿದ್ದ ವೇದಿಕೆ ಕುಸಿದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಬಹುತೇಕ ಚೇತರಿಸಿಕೊಂಡಿರುವ ಅವರು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.