ಈಗಿನ ಸುದ್ದಿ

ಸೂರ್ಯನೆಲ್ಲಿ: ಸಾಕ್ಷಿಯನ್ನಾಗಿಸಲು ಯುವತಿ ಅರ್ಜಿ

Published On :

ಕೊಚ್ಚಿ: ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣದ ಯುವತಿಯು ಕುರಿಯನ್ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ತನ್ನನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕು ಎಂದು ಕೇರಳ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ತಾವು ಪ್ರಮುಖ ಸಾಕ್ಷಿಯಾಗಿದ್ದು, ವಿಚಾರಣೆಯಲ್ಲಿ ತಮ್ಮ ಪಾತ್ರ ಅತ್ಯಗತ್ಯವಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅಫಿವಿಟ್ ಸಲ್ಲಿಸಿದ್ದ ಕೇರಳ ಸರ್ಕಾರ, ಅತ್ಯಾಚಾರ ಪ್ರಕರಣ ದಾಖಲಿಸಿರುವ ಮಹಿಳಾ ಸಂಘಂ ಸಂಸ್ಥೆಯ ದೂರು ದುರುದ್ದೇಶಪೂರ್ವಕವಾಗಿದ್ದು, ಪ್ರಕರಣವನ್ನು ಕೈ ಬಿಡಬೇಕು ಎಂದು ನ್ಯಾಯಾಲಯದಲ್ಲಿ ಮನವಿ ಮಾಡಿತ್ತು. ಸರ್ಕಾರದ ಈ ನಿಲುವನ್ನು ಮಹಿಳಾ ಸಂಘಟನೆಗಳು ಮತ್ತು ಅತ್ಯಾಚಾರಕ್ಕೊಳಗಾಗಿದ್ದೇನೆ ಎನ್ನುತ್ತಿರುವ ಮಹಿಳೆ ತೀವ್ರವಾಗಿ ಖಂಡಿಸಿದ್ದರು. ಅಲ್ಲದೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುರಿಯನ್ ಅವರನ್ನು ರಕ್ಷಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಇದೀಗ ಸ್ವತಃ ಮಹಿಳೆಯೇ ತನ್ನನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿರುವುದು ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.