ಈಗಿನ ಸುದ್ದಿ

ಜೈಲಿನಿಂದ 'ಶ್ರೀ' ಬಿಡುಗಡೆ; ಕೇರಳದಲ್ಲಿ ಅದ್ಧೂರಿ ಸ್ವಾಗತ

ಜೈಲಿನಿಂದ 'ಶ್ರೀ' ಬಿಡುಗಡೆ; ಕೇರಳದಲ್ಲಿ ಅದ್ಧೂರಿ ಸ್ವಾಗತ
Published On :

ಕೊಚ್ಚಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕ್ರಿಕೆಟ್ ಆಟಗಾರ ಶ್ರೀಶಾಂತ್ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದು, ಇಂದು ಬೆಳಗ್ಗೆ ಕೇರಳದ ಕೊಚ್ಚಿಗೆ ಆಗಮಿಸಿದ್ದಾರೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಶ್ರೀಶಾಂತ್ ಸೇರಿದಂತೆ ಪ್ರಕರಣದ ಎಲ್ಲ 21 ಆರೋಪಿಗಳಿಗೆ ನಿನ್ನೆ ಜಾಮೀನು ಮಂಜೂರು ಮಾಡಿತ್ತು. ನಿನ್ನೆ ಸಂಜೆಯೇ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದ ಶ್ರೀಶಾಂತ್, ಇಂದು ಬೆಳಗ್ಗೆ ತಮ್ಮ ತವರು ರಾಜ್ಯ ಕೇರಳಕ್ಕೆ ಆಗಮಿಸಿದರು. ಶ್ರೀಶಾಂತ್ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ನೂರಾರು ಅಭಿಮಾನಿಗಳು ಅವರನ್ನು ಮುತ್ತಿಕೊಂಡರು. ಅಲ್ಲದೆ ಕೆಲವರು ಶ್ರೀಶಾಂತ್‌ಗೆ ಶಾಲು ಹೊದಿಸಿ, ಅದ್ಧೂರಿಯಾಗಿ ಬರಮಾಡಿಕೊಂಡರು.

ಈ ವೇಳೆ ವಿಮಾನ ನಿಲ್ದಾಣದಲ್ಲಿ ಸೇರಿದ್ದ ಪತ್ರಕರ್ತರೊಂದಿಗೆ ಮಾತನಾಡಿದ ಶ್ರೀಶಾಂತ್, 'ತಾವು ಯಾವುದೇ ತಪ್ಪು ಮಾಡಿಲ್ಲ. ನ್ಯಾಯಾಲಯದ ವಿಚಾರಣೆಯಿಂದ ತಾವು ನಿರ್ದೋಷಿಯಾಗಿ ಹೊರಬರುತ್ತೇನೆ ಮತ್ತು ಶೀಘ್ರದಲ್ಲಿಯೇ ಭಾರತ ಕ್ರಿಕೆಟ್ ತಂಡವನ್ನು ಸೇರಿಕೊಳ್ಳುತ್ತೇನೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. ಐಪಿಎಲ್‌ನಲ್ಲಿ ರಾಜಸ್ತಾನ ತಂಡದ ಪರವಾಗಿ ಆಡುತ್ತಿದ್ದ ಶ್ರೀಶಾಂತ್ ಅವರು ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಕಳೆದ ಮೇ 16ರಂದು ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಸತತ 27 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದ ಶ್ರೀಶಾಂತ್‌ಗೆ ನಿನ್ನೆ ದೆಹಲಿ ನ್ಯಾಯಾಲಯ ಜಾಮೀನು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.