ಈಗಿನ ಸುದ್ದಿ

ಹಲ್ಲೆ ಆರೋಪ; ಕ್ರಿಕೆಟಿಗ ಡೇವಿಡ್ ವಾರ್ನರ್ ಅಮಾನತು

ಹಲ್ಲೆ ಆರೋಪ; ಕ್ರಿಕೆಟಿಗ ಡೇವಿಡ್ ವಾರ್ನರ್ ಅಮಾನತು
Published On :

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಅವರನ್ನು ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಅಮಾನತು ಮಾಡಿದೆ.

ಕುಡಿದ ಮತ್ತಿನಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್ ಮೇಲೆ ಹಲ್ಲೆ ಮಾಡಿದ ಆರೋಪ ಸಂಬಂಧ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ (ಸಿಎ) ವಾರ್ನರ್ ಅವರನ್ನು ಅಮಾನತುಗೊಳಿಸಿದೆ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಂಡಿರುವ ವಾರ್ನರ್ ಅವರನ್ನು ಈ ಕೂಡಲೇ ಜಾರಿಯಾಗುವಂತೆ ಅಮಾನತು ಮಾಡಲಾಗಿದೆ.

ಚಾಂಪಿಯನ್ಸ್ ಟ್ರೋಫಿಗೂ ಮೊದಲು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ಸೋತಿತ್ತು. ಅಲ್ಲದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ 48 ರನ್‌ಗಳಿಂದ ಸೋಲನ್ನು ಅನುಭವಿಸಿತ್ತು. ಸೋಲಿನ ನಂತರ ತೀವ್ರ ಬೇಸರಗೊಂಡಿದ್ದ ಡೇವಿಡ್ ವಾರ್ನರ್ ಮತ್ತು ತಂಡದ ಸಹ ಆಟಗಾರರು ಸ್ಥಳೀಯ ಬಾರ್‌ಗೆ ತೆರಳಿ ಮಧ್ಯಪಾನ ಮಾಡಿದ್ದರು. ಈ ವೇಳೆ ಅದೇ ಬಾರ್‌ಗೆ ಆಗಮಿಸಿದ್ದ ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್ ಮೇಲೆ ವಾರ್ನರ್ ಮಾತಿನ ಚಕಮಕಿ ನಡೆಸಿ, ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಸ್ತುತ ವಾರ್ನರ್ ವಿರುದ್ಧ ಇಂಗ್ಲೆಂಡ್ ತಂಡದ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಾರ್ನರ್ ಇದೇ ಬುಧವಾರ ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.